ಮಡಿಕೇರಿ, ಫೆ. ೧೪: ಹೊದ್ದೂರು ಗ್ರಾಮದ ಐತಿಹಾಸಿಕ ಶ್ರೀ ಶಾಸ್ತ-ಈಶ್ವರ ದೇವರ ೨ನೇ ವರ್ಷದ ವಾರ್ಷಿಕೋತ್ಸವ ಹಾಗೂ ವಿಷ್ಣುಮೂರ್ತಿ ಕೋಲ ತಾ. ೧೭ ಮತ್ತು ೧೮ ರಂದು ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಅಧ್ಯಕ್ಷ ಕೂಡಂಡ ರಾಜೇಂದ್ರ ಅಯ್ಯಮ್ಮ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಎರಡು ದಿನಗಳ ಕಾಲ ನಡೆಯಲಿರುವ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳ ಕುರಿತು ಮಾಹಿತಿ ನೀಡಿದರು
ತಾ. ೧೭ ರಂದು ಬೆಳಿಗ್ಗೆ ೯ ಗಂಟೆಗೆ ಗಣಹೋಮ, ಸಹಸ್ರ ನಾಮ ಅರ್ಚನೆ, ಶ್ರೀ ಬೇಟೆ ಅಯ್ಯಪ್ಪ ಹಾಗೂ ಶ್ರೀ ವಿಷ್ಣುಮೂರ್ತಿ ದೈವ ಸನ್ನಿಧಿ ಅಭಿಷೇಕ ಪೂಜೆ, ಮಂಗಳಾರತಿ ಹಾಗೂ ಅನ್ನಸಂತರ್ಪಣೆ ನೆರವೇರಲಿದೆ.
ಅಂದು ಸಂಜೆ ೬ ಗಂಟೆಗೆ ದೇವರ ನೃತ್ಯ ಬಲಿ, ಅಲಂಕಾರ ಪೂಜೆ, ಅನ್ನಸಂತರ್ಪಣೆ ಬಳಿಕ ತೋಯತ ತೆರೆ ನಡೆಯಲಿದೆ.
ತಾ. ೧೮ ರಂದು ಪ್ರಾತಃಕಾಲ ೭ ಗಂಟೆಗೆ ಶ್ರೀ ವಿಷ್ಣುಮೂರ್ತಿ ದೈವದ ಕೋಲ ಜರುಗಲಿದ್ದು, ನಾಡಿನ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇವರ ಕೃಪೆಗೆ ಪಾತ್ರರಾಗುವಂತೆ ಮನವಿ ಮಾಡಿದರು.
ದೇವತಾ ಕಾರ್ಯದ ಪೂಜಾ ಕಾರ್ಯ ಹಾಗೂ ಅನ್ನಸಂತರ್ಪಣೆಗೆ ಅಕ್ಕಿ, ತೆಂಗಿನಕಾಯಿ, ಎಣ್ಣೆ, ತರಕಾರಿ ಗಳಂತಹ ದಿನಸಿ ಸಾಮಾಗ್ರಿಗಳನ್ನು ಉದಾರವಾಗಿ ನೀಡಬಯಸುವವರು ೯೮೪೫೫೭೧೨೯೦ ಸಂಪರ್ಕಿಸುವAತೆ ಕೂಡಂಡ ರಾಜೇಂದ್ರ ಅಯ್ಯಮ್ಮ ತಿಳಿಸಿದರು.