ಕೂಡಿಗೆ, ಫೆ. ೧೪: ಕೂಡುಮಂಗಳೂರು ಗ್ರಾಮ ಪಂಚಾಯಿತಿಯು ೨೦೨೨-೨೩ನೇ ಸಾಲಿನಲ್ಲಿ ರಾಜ್ಯ ಸರ್ಕಾರ ನೀಡುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಂಡಿದೆ.

ಕೂಡುಮAಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯು ೨೦೨೧-೨೨ರ ಸಾಲಿನಲ್ಲಿ ಅಭಿವೃದ್ಧಿ ಕಾಮಗಾರಿಗಳ ಪರಿಷ್ಕರಣೆ ಮತ್ತು ಮೊದಲಿಗೆ ಗ್ರಾಮ ಪಂಚಾಯಿತಿ ಸ್ವಂತ ಸಂಪನ್ಮೂಲ ಕ್ರೋಢೀಕರಣದಲ್ಲಿ ಅತಿ ಹೆಚ್ಚು ಸಾಧನೆ ಮತ್ತು ಹಸಿ ಕಸ, ಒಣಕಸ ವಿಂಗಡಣೆ ಹಾಗೂ ನಿರ್ವಹಣೆ, ಕೋವಿಡ್ ಸಮಯದಲ್ಲಿ ಗ್ರಾಮಸ್ಥರೊಡನೆ ಕೋವಿಡ್ ಹೋಗಲಾಡಿಸಲು ಶ್ರಮಿಸಿದ ವಿಷಯಗಳು, ತಂತ್ರಜ್ಞಾನದ ಬಳಕೆ, ಹೊಸ ನೈರ್ಮಲ್ಯತೆಯ ಯೋಜನೆ, ಕಸ ವಿಲೇವಾರಿ, ಕುಡಿಯುವ ನೀರಿನ ವ್ಯವಸ್ಥೆ, ಶಾಲಾ, ಅಂಗನವಾಡಿ ಮತ್ತು ಪದವಿಪೂರ್ವ ಕಾಲೇಜು ಆವರಣದಲ್ಲಿ ತಡೆಗೋಡೆ, ತೆರಿಗೆ ವಸೂಲಾತಿಯಲ್ಲಿ ಪ್ರಗತಿ, ನೂತನ ತಂತ್ರಜ್ಞಾನದ ಗ್ರಂಥಾಲಯಗಳ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕೆಲಸವನ್ನು ಕೈಗೊಂಡಿರುವ ಎಲ್ಲಾ ವಿಷಯಗಳ ಆಧಾರದ ಮೇಲೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಕಾಮಗಾರಿಗಳ ಪರಿಷ್ಕರಣೆಯ ಮೇಲೆ ೨೦೨೩ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿಯು ಮುಡಿಗೇರಿಸಿಕೊಂಡಿದೆ.

ಈ ಗ್ರಾಮವು ೨೦೧೮ ರಲ್ಲಿಯೂ ಪ್ರಶಸ್ತಿಯನ್ನು ಪಡೆದಿತ್ತು. ಅದೇ ರೀತಿಯಲ್ಲಿ ಈ ಬಾರಿಯು ಕೂಡುಮಂಗಳೂರು ಗ್ರಾಮ ಪಂಚಾಯಿತಿಯು ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಯನ್ನು ಪಡೆದಿದೆ ಎಂದು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ತಿಳಿಸಿದ್ದಾರೆ.