ಮುಳ್ಳೂರು, ಫೆ. ೧೪: ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ತಾ. ೧೮ ರಂದು ಸಮೀಪದ ಮಾಲಂಬಿ ಮಳೆ ಮಲ್ಲೇಶ್ವರಸ್ವಾಮಿ ಬೆಟ್ಟದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿದೆ ಎಂದು ದೇವಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದು, ಅಂದು ಬೆಳಿಗ್ಗೆ ೭ ರಿಂದ ಮಧ್ಯಾಹ್ನ ೨.೩೦ ಗಂಟೆಯವರೆಗೆ ಮಳೆ ಮಲ್ಲೇಶ್ವರ ಬೆಟ್ಟದ ಮೇಲಿರುವ ದೇವಾಲಯದಲ್ಲಿ ದೇವರಿಗೆ ದೇವತಾ ಪೂಜೆ, ವಿಶೇಷ ಪೂಜಾ ವಿಧಿವಿಧಾನಗಳನ್ನು ನಡೆಸಲಾಗುವುದು. ಬೆಟ್ಟದ ಕೆಳ ಭಾಗದಲ್ಲಿ ಬೆಳಿಗ್ಗೆ ೭ ಗಂಟೆಯಿAದ ಸಂಜೆ ೫ ಗಂಟೆವರೆಗೆ ಜಾತ್ರೆ ನಡೆಯುತ್ತದೆ ಹಾಗೂ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಲಿದೆ ಎಂದು ದೇವಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.