ಮಡಿಕೇರಿ, ಫೆ. ೧೪: ಹಿಂದುಳಿದ ವರ್ಗಗಳ ಪ್ರವರ್ಗ-೨ಎನಲ್ಲಿ ಬರುವ ಮಡಿವಾಳ ಮತ್ತು ಇದರ ಉಪ ಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಮಡಿವಾಳ ಮತ್ತು ಇದರ ಉಪಜಾತಿಗಳಿಗೆ ಸೇರಿದ ಸಣ್ಣ ಮತ್ತು ಅತೀ ಸಣ್ಣ ರೈತರಾಗಿದ್ದು, ಹಾಲಿ ಜಮೀನುಗಳು ಖುಷ್ಕಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. ೯೮ ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. ೧.೨೦ ಲಕ್ಷಗಳ ಒಳಗಿರಬೇಕು. ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊAಡAತೆ ಕನಿಷ್ಟ ೧ ಎಕರೆ ಜಮೀನು ಹೊಂದಿರಬೇಕು. ವೈಯುಕ್ತಿ ಕೊಳವೆ ಬಾವಿ ಯೋಜನೆಯಲ್ಲಿ ಘಟಕ ವೆಚ್ಚ ರೂ. ೨.೫೦ ಲಕ್ಷಗಳು, ಇದರಲ್ಲಿ ರೂ. ೨ ಲಕ್ಷ ಸಹಾಯಧನ ಹಾಗೂ ರೂ. ೫೦ ನಿಗಮದಿಂದ ಶೇ.೪ರ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.
ರೈತರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿ ಇರುವಂತೆ ರೈತರ ಹೆಸರು (ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು.
ಈ ಯೋಜನೆಗಳಲ್ಲಿ ಅರ್ಜಿದಾರರು/ ವಿದ್ಯಾರ್ಥಿಗಳು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ ೩ ರೊಳಗೆ ಸಲ್ಲಿಸಬಹುದು.
ಈ ಯೋಜನೆಗಳಿಗೆ ಸಂಬAಧಿಸಿದAತೆ ಅರ್ಜಿ ಸಲ್ಲಿಸಬಯಸುವ ಅರ್ಜಿದಾರರು/ವಿದ್ಯಾರ್ಥಿಗಳು ಹಿಂದೆ ನಿಗಮದ ಯಾವುದಾದರೂ ಯೋಜನೆಗಳಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಮಡಿವಾಳ ಮತ್ತು ಇದರ ಉಪ ಜಾತಿಗೆ ಸೇರಿದ ಅರ್ಜಿದಾರರು ನಿಗಮದ ವೆಬ್ ಸೈಟ್ hಣಣಠಿs://ಞmmಜ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿ ಪಡೆಯಲು ನಿಗಮದ ಸಹಾಯವಾಣಿ ಸಂಖ್ಯೆ ೦೮೦-೨೨೩೭೪೮೩೨ ಮತ್ತು ೮೦೫೦೭೭೩೦೦೪/೫, ೮೦೫೦೩೭೦೦೦೬, ೭೦೯೦೪೦೦೧೦೦, ೭೦೯೦೪೦೦೯೦೦ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ದೂ. ೦೮೨೭೨-೨೨೧೬೫೬ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.