ಮಡಿಕೇರಿ, ಫೆ. ೧೫: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಪ್ರಯುಕ್ತ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಳ್ಳುಕೊಚ್ಚಿ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ತಾ. ೨೦ ರಂದು ಬೆಳಿಗ್ಗೆ ೧೦ ಗಂಟೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ತಹಶೀಲ್ದಾರ್ ಕಿರಣ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಪ್ರಯುಕ್ತ ಕರಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆತ್ತುಕಾಯ ವಿಎಸ್‌ಎಸ್‌ಎನ್ ಸಭಾಂಗಣದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ತಾ. ೧೭ ರಂದು ನಡೆಯಬೇಕಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮ ತಾ. ೨೦ ರಂದು ನಡೆಯಲಿದೆ ಎಂದು ತಾಲೂಕು ತಹಶೀಲ್ದಾರ್ ಅವರು ಹೇಳಿದ್ದಾರೆ.