ಸೋಮವಾರಪೇಟೆ, ಫೆ. ೧೬: ಸಮೀಪದ ಗೌಡಳ್ಳಿ ಗ್ರಾಮದ ಶ್ರೀ ನವದುರ್ಗಾ ಪರಮೇಶ್ವರಿ ದೇವಾಲಯದ ಜಾತ್ರೋತ್ಸವ ಇಂದಿನಿAದ ಆರಂಭಗೊAಡಿದ್ದು, ಗೌಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಿ.ಜಿ.ಮಲ್ಲಿಕಾ ಅವರು ಜ್ಯೋತಿ ಬೆಳಗುವ ಮೂಲಕ ಜಾತ್ರೋತ್ಸವಕ್ಕೆ ಚಾಲನೆ ನೀಡಿದರು.

ಜಾತ್ರೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ದೇವಾಲಯ ಸಮಿತಿ ವತಿಯಿಂದ ಆಯೋಜಿಸ ಲಾಗಿದ್ದು, ಮುಕ್ತ ಫುಟ್ಬಾಲ್ ಪಂದ್ಯಾಟಕ್ಕೆ ಗೌಡಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಆರ್.ಸುರೇಶ್ ಚಾಲನೆ ನೀಡಿದರು.

ಪ್ರತಿ ವರ್ಷ ಗೌಡಳ್ಳಿಯಲ್ಲಿ ಜಾತ್ರೋತ್ಸವ ಪ್ರಯುಕ್ತ ಕ್ರೀಡಾಸ್ಪರ್ಧೆಗಳು ನಡೆಯುತ್ತಿದ್ದು, ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಇದೊಂದು ವೇದಿಕೆಯಾಗಿದೆ. ಕ್ರೀಡೆಯಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಯಾಗುತ್ತದೆ. ಉತ್ತಮ ಆರೋಗ್ಯದ ದೃಷ್ಟಿಯಿಂದಲೂ ಕ್ರೀಡೆ ಅವಶ್ಯಕ ವಾಗಿದೆ. ಗ್ರಾಮೀಣ ಭಾಗದಲ್ಲಿ ಎಲೆಮರೆ ಕಾಯಿಯಂತಿರುವ ಪ್ರತಿಭೆಗಳಿಗೆ ಪೋತ್ಸಾಹ ನೀಡಬೇಕು ಎಂದು ಸುರೇಶ್ ಅಭಿಪ್ರಾಯಿಸಿದರು.

ವೇದಿಕೆಯಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಬಿ.ಪಿ.ಮೊಗಪ್ಪ, ಉಪಾಧ್ಯಕ್ಷ ಎಚ್.ಎನ್.ಚಂದ್ರಶೇಖರ್, ಮಾಜಿ ಅಧ್ಯಕ್ಷ ಎಚ್.ಆರ್.ಮುತ್ತಣ್ಣ, ಪಿಡಿಓ ಲಿಖಿತ, ಪ್ರಮುಖರಾದ ವಿಶ್ವರೂಪಾಚಾರ್, ಮಹೇಶ್, ಜಿ.ಎ.ಮಹೇಶ್, ಮಮತಾ ಲೋಕೇಶ್, ನಾಗರತ್ನ, ಟಿ.ಆರ್.ರಾಮಚಂದ್ರ, ಗುರುಪ್ರಸಾದ್, ಕೆ.ಜಿ.ದಿನೇಶ್, ಪ್ರವೀಣ್, ವಿ.ಸಿ.ಸುಮಂತ್ ಮತ್ತಿತರರು ಇದ್ದರು.