ಸೋಮವಾರಪೇಟೆ, ಫೆ. ೧೬: ಸಮೀಪದ ಯಡೂರು ಗ್ರಾಮದ ವೈಸಿಸಿ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ತಾ. ೧೮ ಮತ್ತು ೧೯ ರಂದು ೨೩ನೇ ವರ್ಷದ ಮುಕ್ತ ಕ್ರಿಕೆಟ್ ಪಂದ್ಯಾವಳಿಯು ಯಡೂರು ಬಿಟಿಸಿಜಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಸಿ.ಎಂ. ಸುರೇಶ್ ತಿಳಿಸಿದ್ದಾರೆ.

ತಾ. ೧೮ ರಂದು ಬೆಳಿಗ್ಗೆ ೯.೩೦ಕ್ಕೆ ಪಂದ್ಯಾವಳಿಯ ಉದ್ಘಾಟನೆ ನಡೆಯಲಿದೆ. ತಾ. ೧೯ ರಂದು ಸಂಜೆ ೫ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ. ವಿಜೇತ ತಂಡಗಳು ಮತ್ತು ವೈಯಕ್ತಿಕ ವಿಭಾಗದಲ್ಲಿ ಬಹುಮಾನ ನೀಡಲಾಗುವುದು. ಕಾರ್ಯಕ್ರಮದಲ್ಲಿ ಯಡೂರಿನ ಮಾಜಿ ಸೈನಿಕ ಸಿ.ಎಂ. ಪ್ರದೀಪ್, ವೈ.ಆರ್. ಪ್ರವೀಣ್, ನಿವೃತ್ತ ಪ್ರಾಂಶುಪಾಲ ಹೆಚ್.ಎನ್. ರಾಜು ಅವರುಗಳನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.