ಗೋಣಿಕೊಪ್ಪಲು, ಫೆ. ೧೫: ಇತ್ತೀಚಿನ ದಿನಗಳಲ್ಲಿ ರಾಜಕೀಯ ಕ್ಷೇತ್ರಗಳು ಮಲೀನವಾಗಿವೆ. ಇದರಿಂದ ಜನರಲ್ಲಿರುವ ವಿಶ್ವಾಸ ದೂರವಾಗಿದೆ. ರಾಜಕೀಯ ಅನ್ನುವುದು ಸೇವಾ ಕೇಂದ್ರವಾಗಬೇಕೇ ವಿನಃ ಭ್ರಷ್ಟಾಚಾರದ ಕೂಪವಾಗಬಾರದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅಭಿಪ್ರಾಯ ಪಟ್ಟರು.
ಗೋಣಿಕೊಪ್ಪಲಿನ ಪರಿಮಳ ಮಂಗಳ ವಿಹಾರದಲ್ಲಿ ಆಯೋಜನೆಗೊಂಡಿದ್ದ ಕರ್ನಾಟಕ ಸರ್ವೋದಯ ಪಕ್ಷದ ಚುನಾವಣಾ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಇವರು, ಮುಂದಿನ ಚುನಾವಣೆಯಲ್ಲಿ ರೈತ ಸಂಘದಿAದ ಸಕ್ರಿಯ ಕಾರ್ಯಕರ್ತರನ್ನು ಪಕ್ಷದ ವತಿಯಿಂದ ಚುನಾವಣ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ. ಈಗಾಗಲೇ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ರೈತ ಹೋರಾಟಗಾರ, ರೈತ ಸಂಘವನ್ನು ಜಿಲ್ಲೆಯಲ್ಲಿ ಬಲಿಷ್ಠವಾಗಿ ಕಟ್ಟಿ ಬೆಳೆಸಿದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅವರನ್ನು ಕಣಕ್ಕಿಳಿಸಿದ್ದೇವೆ ಎಂದರು.
ರೈತರು, ಕಾರ್ಮಿಕರು ಹಾಗೂ ಬಡಜನರು ಕೊಡಗಿನಲ್ಲಿ ಅನೇಕ ವರ್ಷಗಳಿಂದ ಅನುಭವಿಸುತ್ತಿರುವ ಕಷ್ಟ ಕಾರ್ಪಣ್ಯಗಳ ಬಗ್ಗೆ ಇವರಿಗೆ ಮಾಹಿತಿ ಇದೆ. ಈ ನಿಟ್ಟಿನಲ್ಲಿ ಚುನಾವಣೆಗೆ ಮನು ಸೋಮಯ್ಯ ಅವರು ಸ್ಪರ್ಧಿಸುತ್ತಿರುವುದು ಸಮಯೋಚಿತವಾಗಿದೆ. ಆ ನಿಟ್ಟಿನಲ್ಲಿ ರೈತ ಸಂಘದ ಕಾರ್ಯಕರ್ತರು ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲೆಗೆ ರೈತ ಸಂಘದಿAದ ನಡೆಸಿದ ಹೋರಾಟದ ಫಲಗಳನ್ನು ವಿವರಿಸುತ್ತ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ರಾಜ್ಯ ಮಟ್ಟದ ನಾಯಕರು ಕ್ಷೇತ್ರದಲ್ಲಿ ಪ್ರಚಾರ ಸಭೆಗಳನ್ನು ನಡೆಸುವ ಮೂಲಕ ಸಮಾನ ಮನಸ್ಕರನ್ನು ಒಂದೇ ವೇದಿಕೆಯಡಿಯಲ್ಲಿ ತರಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಶಕ್ತಿ ಮೀರಿ ಕಾರ್ಯಕರ್ತರು ದುಡಿಯುವಂತೆ ಕರೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ರೈತ ಸಂಘದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಮಾತನಾಡಿ, ಜಿಲ್ಲೆಯಲ್ಲಿ ರೈತ ಸಂಘವನ್ನು ಕಳೆದ ಒಂದು ದಶಕದಿಂದ ಉತ್ತಮವಾಗಿ ನಡೆಸಿಕೊಂಡು ಬಂದಿದ್ದೇವೆ, ನೂರಾರು ಸಮಸ್ಯೆಗಳಿಗೆ ಹೋರಾಟದ ಮೂಲಕ ಪರಿಹಾರ ಕಂಡುಕೊAಡಿದ್ದೇವೆ. ಕೊಡಗಿನ ಜ್ವಲಂತ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸುವಲ್ಲಿ ಇಲ್ಲಿಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಈ ನಿಟ್ಟಿನಲ್ಲಿ ರೈತ ಸಂಘದ ವರಿಷ್ಠರ ಸೂಚನೆ ಮೇರೆಗೆ ಹಾಗೂ ಜಿಲ್ಲೆಯ ರೈತ ಸಂಘದ ಸದಸ್ಯರ ಅಭಿಪ್ರಾಯದಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಈಗಾಗಲೇ ಕ್ಷೇತ್ರದ ಹಲವು ಭಾಗದಲ್ಲಿ ಭೇಟಿ ನೀಡಿ ಜನರ ವಿಶ್ವಾಸ ಪಡೆಯಲಾಗಿದೆ. ಉತ್ತಮವಾದ ಬೆಂಬಲ ವ್ಯಕ್ತವಾಗಿದೆ. ಚುನಾವಣೆಯಲ್ಲಿ ಗೆಲುವು ಸೋಲು ಮುಖ್ಯವಲ್ಲ; ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ನಮ್ಮ ಮೂಲ ಉದ್ದೇಶ. ಆ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಸಭೆಗೆ ತಿಳಿಸಿದರು.
ಕರ್ನಾಟಕ ಸರ್ವೋದಯ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ ಪಾಟೀಲ್ ಮಾತನಾಡಿ, ಜಿಲ್ಲೆಗೆ ಹಲವು ಬಾರಿ ಹೋರಾಟದ ಮೂಲಕ ಭಾಗವಹಿಸಿದ್ದೇನೆ. ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಉತ್ತಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದೇವೆ ಎಂದರು. ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪೂಣಚ್ಚ, ರೈತ ಸಂಘದ ಹಿರಿಯ ಮುಖಂಡರಾದ ಪುಚ್ಚಿಮಾಡ ಅಶೋಕ್, ಚೆಪ್ಪುಡೀರ ಕಾರ್ಯಪ್ಪ ಸೇರಿದಂತೆ ಇನ್ನಿತರ ಪ್ರಮುಖರು ಮಾತನಾಡಿದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಖಜಾಂಚಿ ಸಭಿತ ಭೀಮಯ್ಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಜಿಲ್ಲಾ ಸಂಚಾಲಕ ಪುಚ್ಚಿಮಾಡ ಸುಭಾಶ್, ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಆಲೆಮಾಡ ಮಂಜುನಾಥ್, ವೀರಾಜಪೇಟೆ ತಾಲೂಕು ಅಧ್ಯಕ್ಷ ಬಾಚಮಾಡ ಭವಿಕುಮಾರ್, ಶ್ರೀಮಂಗಲ ಹೋಬಳಿ ಅಧ್ಯಕ್ಷ ಕಂಬ ಕಾರ್ಯಪ್ಪ ವಿವಿಧ ಪದಾಧಿಕಾರಿಗಳಾದ ತೀತರಮಾಡ ರಾಜ, ಚೊಟ್ಟೆಕಾಳಪಂಡ ಮನು, ಎಸ್.ಎಸ್. ಸುರೇಶ್, ಪುಚ್ಚಿಮಾಡ ರಾಯ್ ಮಾದಪ್ಪ, ದೇವಣಿರ ವಜ್ರಬೋಪಣ್ಣ, ಸಜೀವ, ಪೂವಯ್ಯ, ಪಾಲೆಕಂಡ ಜೀವನ್ ಬೆಳ್ಳಿಯಪ್ಪ, ಅಮ್ಮಣಿಚಂಡ ರವಿ, ತೀತಿಮಾಡ ಶರಣು, ಅಯ್ಯಣ್ಣ, ಮೇಚಂಡ ಕಿಶ ಮಾಚಯ್ಯ, ರಘು, ಪುಚ್ಚಿಮಾಡ ಕವಿತ ಸುನೀಲ್, ಶಿಲ್ಪರಾಯ್, ಚೆಟ್ರುಮಾಡ ಮಂಜುಳ ಬೋಪಯ್ಯ, ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು. ಸುಜಯ್ ಬೋಪಯ್ಯ ಸ್ವಾಗತಿಸಿ, ಕಾರ್ಯಪ್ಪ ವಂದಿಸಿದರು.