ಸೋಮವಾರಪೇಟೆ, ಫೆ. ೧೬: ನಗರೋತ್ಥಾನ ಯೋಜನೆಯಡಿ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಚರಂಡಿ, ರಸ್ತೆ ಕಾಮಗಾರಿಯು ಅಂಕೆಯಿಲ್ಲ ದಂತಾಗಿದ್ದು, ಗುತ್ತಿಗೆದಾರ ಬೇಕಾಬಿಟ್ಟಿ ಕಾಮಗಾರಿ ನಡೆಸುತ್ತಿರುವುದು ಸಾರ್ವಜನಿಕರ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಕೆಲವೆಡೆ ಕ್ರಿಯಾಯೋಜನೆಯಂತೆ ಕಾಮಗಾರಿ ನಿರ್ವಹಿಸದೇ ಕಳಪೆ ಮಾಡುತ್ತಿರುವ ಬಗ್ಗೆಯೂ ದೂರುಗಳು ಕೇಳಿಬರುತ್ತಿದ್ದು, ಇನ್ನು ಕೆಲವೆಡೆ ಕಾಂಕ್ರೀಟ್ ರಸ್ತೆಗೆಂದು ಈ ಹಿಂದೆ ಇದ್ದ ರಸ್ತೆಯನ್ನು ಅಗೆದು ಹಾಗೆಯೇ ಬಿಡಲಾಗಿದೆ.
ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ೨.೧೨ ಕೋಟಿ ಅನುದಾನ ಬಿಡುಗಡೆ ಯಾಗಿದ್ದು, ಇದಕ್ಕೆ ಕ್ರಿಯಾಯೋಜನೆ ತಯಾರಾಗಿ ಅನುಮೋದನೆಯೂ ದೊರೆತಿದ್ದು,
(ಮೊದಲ ಪುಟದಿಂದ) ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಭೂಮಿ ಪೂಜೆಯನ್ನೂ ನೆರವೇರಿಸಿದ್ದಾರೆ.
ಭೂಮಿ ಪೂಜೆ ನೆರವೇರಿಸುವ ಸಂದರ್ಭವೇ ಶೀಘ್ರವಾಗಿ ಕಾಮಗಾರಿ ಪ್ರಾರಂಭಿಸಿ ಪೂರ್ಣಗೊಳಿಸಬೇಕೆಂದು ಸಂಬAಧಿಸಿದ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದರು. ಈ ಸಂದರ್ಭ ತಲೆಯಾಡಿಸಿದ್ದ ಗುತ್ತಿಗೆದಾರರು ಭೂಮಿಪೂಜೆ ನೆರವೇರಿಸಿ ಒಂದೆರಡು ದಿನಗಳಲ್ಲಿಯೇ ಕಾಮಗಾರಿ ಆರಂಭಿಸಿದ್ದರು. ತದ ನಂತರ ಅತ್ತ ತಲೆ ಹಾಕದೇ ಇರುವುದರಿಂದ ಸ್ಥಳೀಯರು ಸಮಸ್ಯೆ ಎದುರಿಸುವಂತಾಗಿದೆ.
ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಲ್ಲಭಬಾಯಿ ಬಡಾವಣೆಯ ಮನು, ನವೀನ್, ಬಾಲಕೃಷ್ಣ ಅವರುಗಳ ಮನೆಯ ಮುಂಭಾಗದ ರಸ್ತೆಯನ್ನು ಕಾಂಕ್ರಿಟೀಕರಣಗೊಳಿಸಲು ರೂ. ೭ ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಈ ಹಿಂದೆ ಇದ್ದ ರಸ್ತೆಯನ್ನು ಸಂಪೂರ್ಣವಾಗಿ ಅಗೆದು ತೆಗೆಯಲಾಗಿದೆ. ಇದಾದ ತಕ್ಷಣ ವೆಟ್ಮಿಕ್ಸ್ ಹಾಕಿ ರಸ್ತೆಯನ್ನು ಸಮತಟ್ಟು ಮಾಡಿ, ಕಾಂಕ್ರೀಟ್ ಹಾಕಬೇಕಿದ್ದರೂ ಸಹ ಗುತ್ತಿಗೆದಾರ ನಿರ್ಲಕ್ಷö್ಯ ವಹಿಸುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
ರಸ್ತೆಯನ್ನು ಅಗೆದು ತಿಂಗಳಾಗುತ್ತಾ ಬಂದರೂ ಈವರೆಗೆ ಜಲ್ಲಿ, ವೆಟ್ಮಿಕ್ಸ್ ಹಾಕಿಲ್ಲ. ಇದರಿಂದಾಗಿ ಇಡೀ ಬಡಾವಣೆ ಧೂಳಿನಿಂದಾವೃತ್ತವಾಗುತ್ತಿದೆ. ಕಿಟಕಿ, ಬಾಗಿಲು ತೆರೆದರೆ ಧೂಳು ಮನೆಯೊಳಗೆ ಬರುತ್ತಿದೆ. ಮಕ್ಕಳ್ಳು, ವಯಸ್ಕರಿಗೆ ಸಮಸ್ಯೆಯಾಗುತ್ತಿದೆ. ಕಾಮಗಾರಿ ಆರಂಭಿಸುವAತೆ ಗುತ್ತಿಗೆದಾರರಿಗೆ ಮನವಿ ಮಾಡಿದರೆ ಉಡಾಫೆಯ ಉತ್ತರ ನೀಡುತ್ತಿದ್ದಾರೆ ಎಂದು ಸ್ಥಳೀಯರು ಪತ್ರಿಕೆಯೊಂದಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಖುದ್ದು ಶಾಸಕರೇ ಶೀಘ್ರವಾಗಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದ್ದರೂ ಅವರ ನಿರ್ದೇಶನಕ್ಕೆ ಬೆಲೆ ನೀಡುತ್ತಿಲ್ಲ. ಈ ಬಗ್ಗೆ ಶಾಸಕ ಅಪ್ಪಚ್ಚು ರಂಜನ್ ಅವರೇ ಗಮನಹರಿಸಬೇಕು ಎಂದು ಒತ್ತಾಯಿಸಿರುವ ಸ್ಥಳೀಯರು, ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿ ಹಾಗೂ ಅಧಿಕಾರಿ ವರ್ಗ, ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ‘ಶಕ್ತಿ’ಯೊಂದಿಗೆ ಪ್ರತಿಕ್ರಿಯೆ ನೀಡಿರುವ ಪ.ಪಂ. ಮುಖ್ಯಾಧಿಕಾರಿ ನಾಚಪ್ಪ ಅವರು, ಕಳೆದೆರಡು ದಿನಗಳ ಹಿಂದೆ ಗುತ್ತಿಗೆ ದಾರರನ್ನು ಕರೆದು ಮಾತನಾಡಿದ್ದೇವೆ. ಮುಂದಿನ ೨ ದಿನದಲ್ಲಿ ಇಲಾಖೆಯ ಮೇಲಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣ ಗೊಳಿಸಲು ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ. ಟೆಂಡರ್ ರದ್ದುಪಡಿಸಿ ನೂತನವಾಗಿ ಟೆಂಡರ್ ಕರೆದು ಕಾಮಗಾರಿ ಪೂರ್ಣ ಗೊಳಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.