ಸೋಮವಾರಪೇಟೆ,ಫೆ.೧೭: ಮಡಿಕೇರಿಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ತನ್ನ ಅಜ್ಜಿಯ ಮನೆ ಇರುವ ಸೋಮವಾರಪೇಟೆ ಸಮೀಪದ ಚೌಡ್ಲು ಗ್ರಾಮದ ಗಾಂಧಿನಗರಕ್ಕೆ ತೆರಳುವ ಮಾರ್ಗಮಧ್ಯೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಡಿಕೇರಿ ಪುಟಾಣಿ ನಗರದ ನಿವಾಸಿ ಕುಮಾರೇಶ್ ಎಂಬವರ ಪುತ್ರಿ ಕೀರ್ತನ(೧೭) ಮೃತೆ. ಮಡಿಕೇರಿಯ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ಇವಳು, ಇಂದು ಬೆಳಿಗ್ಗೆ ಮಡಿಕೇರಿಯಿಂದ ಕುಶಾಲನಗರದ ಮೂಲಕ ಬಸ್‌ನಲ್ಲಿ ಸೋಮವಾರಪೇಟೆಗೆ ಆಗಮಿಸಿದ್ದು, ನಂತರ ಗಾಂಧಿನಗರದಲ್ಲಿರುವ ತನ್ನ ಅಜ್ಜಿಯ ಮನೆಗೆ ತೆರಳುವ ಮಾರ್ಗ ಮಧ್ಯೆ ಇರುವ ಚೌಡ್ಲು ಗ್ರಾಮದ ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇAದು ಮಧ್ಯಾಹ್ನ ೨.೧೫ಕ್ಕೆ ಚೌಡ್ಲು ಗ್ರಾಮ ಪಂಚಾಯಿತಿ ಮುಂಭಾಗ ಓರ್ವಳೇ ನಡೆದುಕೊಂಡು ಹೋಗುತ್ತಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನಂತರ ಅಜ್ಜಿಯ ಮನೆಗೆ ತೆರಳದೆ ಗ್ರಾಮ ಪಂಚಾಯಿತಿಯಿAದ ಅನತಿ ದೂರದಲ್ಲಿರುವ ಚೌಡ್ಲು ಕೆರೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಆಕೆಯ ದೇಹ ನೀರಿನಲ್ಲಿ ತೇಲುತ್ತಿದ್ದುದನ್ನು ಕಂಡ ದಾರಿಹೋಕರು ಸೋಮವಾರಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸ್ ಸಿಬ್ಬಂದಿಗಳು ಶವವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.