ಕೂಡಿಗೆ, ಫೆ. ೧೭: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ದೊಡ್ಡತ್ತೂರು ಗ್ರಾಮದಲ್ಲಿರುವ ಶ್ರೀ ಉದ್ಭವ ಗೌರಿ ಶಂಕರ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ತಪೋವನ ಮನೆಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ ಮಹಾಸ್ವಾಮಿ ಅವರು ದೇವಸ್ಥಾನದಲ್ಲಿ ಪ್ರಥಮ ಪೂಜಾ ಕೈಂಕರ್ಯಗಳನ್ನು ಆರಂಭ ಮಾಡುವ ಮೂಲಕ ವಿವಿಧ ಪೂಜೆಗಳಿಗೆ ಚಾಲನೆ ನೀಡಿದ್ದರು.
ಈ ಸಂದರ್ಭದಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ರಾಜು, ಕಾರ್ಯದರ್ಶಿ ರವಿ, ಜಿಲ್ಲಾ ಕುರುಬ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರಭಾಕರ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯೆ ಭಾಗ್ಯಮ್ಮ, ಸೇರಿದಂತೆ ಸಮಿತಿಯ ನಿರ್ದೇಶಕರು, ಸದಸ್ಯರು, ಮತ್ತು ಎರಡು ಗ್ರಾಮಗಳ ಗ್ರಾಮಸ್ಥರು ಹಾಜರಿದ್ದರು.