ಸುಂಟಿಕೊಪ್ಪ, ಫೆ.೧೭: ಕಂಬಿಬಾಣೆ ರಾಮ ಮತ್ತು ಚಾಮುಂಡೇಶ್ವರಿ ದೇವಸ್ಥಾನ ಸೇವಾ ಸಮಿತಿ ವತಿಯಿಂದ ಶಿವರಾತ್ರಿ ಹಬ್ಬದ ಪ್ರಯುಕ್ತ ತಾ. ೧೮ ರಂದು (ಇಂದು) ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಲಿದೆ.

ನಂತರ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಮಹಾಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಅನ್ನಸಂತರ್ಪಣೆ ನೆರವೇರಲಿದೆ.

* ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏಳನೇ ಮೈಲು ಗ್ರಾಮದ ಮಹಾದೇವ ಈಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ವಿವಿಧ ವಿಶೇಷ ಪೂಜೆಗಳು ನೆರವೇರಲಿದೆ.

ಸಂಜೆ ೫ ಗಂಟೆಗೆ ಮಹಾಸಂಕಲ್ಪ, ಗಂಗಾಪೂಜೆ, ಗಣಪತಿ ಪೂಜೆ, ಪುಣ್ಯಾಹ, ಪಂಚಕಳಸ, ನವಗ್ರಹ ಪೂಜೆ, ಗಣಪತಿ ಹೋಮ, ನವಗ್ರಹ ಹೋಮ, ಪೂರ್ಣಾಹುತಿ ನಂತರ ಈಶ್ವರ ಸ್ವಾಮಿಗೆ ರುದ್ರಾಭಿಷೇಕ, ಮಹಾಪುಷ್ಪಾಲಂಕಾರ, ಬಿಲ್ವಾರ್ಚನೆ, ಸಹಸ್ರ ದೀಪರಾದನೆಯ ನಂತರ ಮಹಾಪೂಜೆ, ಮಹಾ ಮಂಗಳಾರತಿ, ಪ್ರಸಾದ ವಿನಿಯೋಗದ ನಂತರ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಧಾನ ಅರ್ಚಕ ಅವಿನಾಶ್ ಆರಾಧ್ಯ ತಿಳಿಸಿದ್ದಾರೆ.