ಮಡಿಕೇರಿ, ಫೆ. ೧೭: ಕೊಡವ ಮಕ್ಕಡ ಕೂಟ ಮತ್ತು ಕಾವೇರಿ ಕೇರಿ ಕೊಡವ ಸಂಘದ ಸಂಯುಕ್ತ ಆಶ್ರಯದಲ್ಲಿ ತಾ. ೧೯ ರಂದು ವಕೀಲ, ಕ್ರೀಡಾಪಟು ಹಾಗೂ ಬರಹಗಾರ ಬಾಳೆಯಡ ಕಿಶನ್ ಪೂವಯ್ಯ ಅವರು ಬರೆದಿರುವ ಎರಡು ಪುಸ್ತಕಗಳು ಲೋಕಾರ್ಪಣೆಗೊಳ್ಳಲಿವೆ.

ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಪತ್ರಿಕಾಭವನ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ ಉದ್ಘಾಟಿಸಲಿದ್ದು, ಕಾವೇರಿಕೇರಿ ಕೊಡವ ಸಂಘದ ಅಧ್ಯಕ್ಷರಾದ ಬಲ್ಯಾಟಂಡ ಲತಾ ಚಂಗಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ರಾಜಕೀಯ ಮತ್ತು ಪ್ರಕೃತಿ ಪುಸ್ತಕವನ್ನು ಸಾಹಿತಿ ಹಾಗೂ ವಕೀಲ ಕೆ.ಪಿ. ಬಾಲಸುಬ್ರಮಣ್ಯ (ಕಂಜರ್ಪಣೆ), ವ್ಯಕ್ತಿ ಪರಿಚಯ ಮತ್ತು ಸಾಮಾಜಿಕ ಚಿಂತನೆ ಪುಸ್ತಕವನ್ನು ಎಕ್ಸ್ಪ್ರೆಸ್ ಲಿ. ಸೌತ್ ಬ್ಲೂ ಡಾರ್ಟ್ನ ಹಿರಿಯ ಉಪಾಧ್ಯಕ್ಷ ಹಾಗೂ ಪ್ರಾದೇಶಿಕ ಮುಖ್ಯಸ್ಥ ಬಾಳೆಯಡ ಸಿ. ಕಾಳಪ್ಪ ಅವರು ಬಿಡುಗಡೆ ಮಾಡಲಿದ್ದಾರೆ. ಶಕ್ತಿ ದಿನಪತ್ರಿಕೆ ಪ್ರಧಾನ ಸಂಪಾದಕ ಜಿ. ರಾಜೇಂದ್ರ ಅವರು ಪುಸ್ತಕ ಪರಿಚಯ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಬರಹಗಾರ ಕಿಶನ್ ಪೂವಯ್ಯ ಉಪಸ್ಥಿತರಿರುವರು.