ರೋಹಿಣಿ ಸಿಂಧೂರಿ ವಿರುದ್ಧ ಆರೋಪ

ಮೈಸೂರು, ಫೆ. ೧೯: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಶಾಸಕ ಸಾ.ರಾ. ಮಹೇಶ್ ಅವರ ವಿರುದ್ಧ ಭೂ ಕಬಳಿಕೆ ಆರೋಪವನ್ನು ಮಾಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಸಾ.ರಾ. ಮಹೇಶ್ ಅವರು ಕೂಡ ಪ್ರತಿಕ್ರಿಯೆಗಳನ್ನು ನೀಡುತ್ತಾ ಬರುತ್ತಿದ್ದರು. ಇಬ್ಬರ ನಡುವಿನ ಜಟಾಪಟಿ ಇಡೀ ರಾಜ್ಯದ ಗಮನವನ್ನು ಸೆಳೆದಿತ್ತು. ಸದ್ಯ ಈ ಜಟಾಪಟಿಗೆ ಹೊಸ ಬೆಳವಣಿಗೆಯೊಂದು ನಡೆದಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಮಾಜಿ ಸಚಿವ ಸಾ.ರಾ. ಮಹೇಶ್ ಅವರ ಜೊತೆಗೆ ಸಂಧಾನಕ್ಕೆ ಮುಂದಾಗಿ ದ್ದಾರೆಂದು ಹೇಳಲಾಗುತ್ತಿದೆ. ಈ ಕುರಿತ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿಯವರ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಅವರು ತೀವ್ರವಾಗಿ ಕಿಡಿಕಾರಿದ್ದು, ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ೧೯ ಪ್ರಶ್ನೆಗಳನ್ನು ಕೇಳುವ ಮೂಲಕ ರೋಹಿಣಿ ಸಿಂಧೂರಿ ಈ ಪ್ರಶ್ನೆಗಳಿಗೆ ಉತ್ತರ ಕೊಡುತ್ತಾರಾ ಎಂದು ಕೇಳಿದ್ದಾರೆ.

ಮಹಿಳಾ ಅಧಿಕಾರಿಗಳ ನಡುವೆ ಜಟಾಪಟಿ

ಬೆಂಗಳೂರು, ಫೆ. ೧೯: ರಾಜ್ಯದಲ್ಲಿ ಮಹಿಳಾ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ನಡುವಿನ ಜಟಾಪಟಿ ಮತ್ತಷ್ಟು ತೀವ್ರವಾಗಿದ್ದು, ಐಪಿಎಸ್ ಅಧಿಕಾರಿ ಡಿ. ರೂಪಾ ಆರೋಪಕ್ಕೆ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು, ವೈಯಕ್ತಿಕ ನಿಂದನೆ ಹಾಗೂ ತೇಜೋವಧೆ ವಿರುದ್ಧ ಐಪಿಎಸ್ ಸೆಕ್ಷನ್‌ಗಳಡಿ ಕೇಸ್ ದಾಖಲಿಸುವುದಾಗಿ ಹೇಳಿದ್ದಾರೆ. ಡಿ. ರೂಪಾ ಅವರು ತಮ್ಮ ಕೆಲ ಖಾಸಗಿ ಫೋಟೋಗಳನ್ನು ಬಿಡುಗಡೆ ಮಾಡಿ ಸಾಲು ಸಾಲು ಆರೋಪಗಳನ್ನು ಮಾಡಿದ ಬೆನ್ನಲ್ಲೇ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ರೋಹಿಣಿ ಸಿಂಧೂರಿ, ವಾಟ್ಸಪ್ ಸ್ಟೇಟಸ್‌ಗಳಲ್ಲಿ ಹಾಕಿದ್ದ ಫೋಟೋಗಳನ್ನು ಬಳಸಿ ನಿಂದನೆ ಹಾಗೂ ತೇಜೋವಧೆ ಮಾಡಿದ್ದಾರೆ. ನಾನು ಯಾವ ಅಧಿಕಾರಿಗೆ ಫೋಟೋಸ್ ಕಳುಹಿಸಿದ್ದೆ ಅಂತ ಹೆಸರು ಬಹಿರಂಗಪಡಿಸಬೇಕು ಎಂದು ಸವಾಲು ಹಾಕಿದ್ದಾರೆ. ಅಲ್ಲದೇ ಆ ಬಗ್ಗೆ ತನಿಖೆ ನಡೆಯಬೇಕೆಂದು ರೋಹಿಣಿ ಸಿಂಧೂರಿ ಒತ್ತಾಯಿಸಿದ್ದಾರೆ. ಡಿ. ರೂಪಾ ಮಾನಸಿಕ ಸ್ಥಿಮಿತ ಕಳೆದುಕೊಂಡವರAತೆ ವರ್ತಿಸುತ್ತಿದ್ದಾರೆ. ಆಧಾರರಹಿತ ಆರೋಪ ಮಾಡಿ ಮಾಧ್ಯಮಗಳ ಗಮನ ಸೆಳೆಯುತ್ತಿದ್ದಾರೆ. ವೈಯಕ್ತಿಕ ನಿಂದನೆ, ತೇಜೋವಧೆ ವಿರುದ್ಧ ಕಾನೂನು ಕ್ರಮಕ್ಕಾಗಿ ಸಕ್ಷಮ ಪ್ರಾಧಿಕಾರದ ಮುಂದೆ ದೂರು ಸಲ್ಲಿಸುತ್ತೇನೆ ಎಂದು ಸಿಂಧೂರಿ ತಿಳಿಸಿದ್ದಾರೆ. ರೂಪಾ ಅವರು ಯಾವಾಗಲು ಸುದ್ದಿಯಲ್ಲಿರಬೇಕೆಂದು ಬಯಸಿ ಈ ರೀತಿ ಪೋಸ್ಟ್ ಹಾಕಿದ್ದಾರೆ. ಸಾಮಾಜಿಕ ತಾಣಗಳಲ್ಲಿ ಈ ರೀತಿ ಪೋಸ್ಟ್ಗಳ ಮೂಲಕ ಸುದ್ದಿಯಲ್ಲಿರಲು ಪ್ರಯತ್ನ ಮಾಡುತ್ತಿದ್ದಾರೆ. ಒಳ್ಳೆಯ ಕೆಲಸ ಮಾಡುವುದು ಬಿಟ್ಟು ಇನ್ನೊಬ್ಬರ ತೋಜೋವಧೆ ಮಾಡುತ್ತಿದ್ದಾರೆ ಎಂದು ಸಿಂಧೂರಿ ಕಿಡಿಕಾರಿದ್ದಾರೆ.

ಟರ್ಕಿಯಿಂದ ಮರಳಿದ ಎನ್‌ಡಿಆರ್‌ಎಫ್ ತಂಡ

ನವದೆಹಲಿ, ಫೆ. ೧೯: ಸರಣಿ ಭೂಕಂಪದಿAದ ತತ್ತರಿಸಿದ್ದ ಟರ್ಕಿಗೆ ನೆರವು ನೀಡಲು ತೆರಳಿದ್ದ ಭಾರತದ ರಾಷ್ಟಿçÃಯ ವಿಪತ್ತು ನಿರ್ವಹಣಾ ಪಡೆಯ ಕೊನೆ ತಂಡ ತವರಿಗೆ ಮರಳಿದೆ. ಟರ್ಕಿ ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರೆಸಿಡೆನ್ಸಿ ರಕ್ಷಣಾ ಕಾರ್ಯಾಚರಣೆ ಅಂತ್ಯಗೊಳಿಸುವುದಾಗಿ ಘೋಷಿಸಿದ ನಂತರ ‘ಆಪರೇಷನ್ ದೋಸ್ತ್’ ಅಡಿಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ತೆರಳಿದ್ದ ಎನ್‌ಡಿಆರ್ ಆಫ್ ತಂಡ ಇಂದು ಭಾರತಕ್ಕೆ ಮರಳಿದೆ. ಆಪರೇಷನ್ ದೋಸ್ತ್ ಅಡಿಯಲ್ಲಿ ೧೫೧ ಎನ್‌ಡಿಆರ್‌ಎಫ್ ಸಿಬ್ಬಂದಿ ಮತ್ತು ಶ್ವಾನ ದಳ ಒಳಗೊಂಡ ಮೂರು ತಂಡಗಳು ಭೂಕಂಪ ಪೀಡಿತ ಟರ್ಕಿಗೆ ತೆರಳಿದ್ದವು. ಎನ್‌ಡಿಆರ್‌ಎಫ್ ತಂಡಗಳು ಟರ್ಕಿಯ ನೂರ್ಡಗಿ ಮತ್ತು ಅಂತಕ್ಯದಲ್ಲಿ ೩೫ ಜನರನ್ನು ರಕ್ಷಿಸಿದ್ದು, ಶೋಧ, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಟ್ವೀಟ್ ಮಾಡಿದ್ದಾರೆ. ಟರ್ಕಿ ಮತ್ತು ಸಿರಿಯಾದಲ್ಲಿ ಭೀಕರ ಭೂಕಂಪ ಸಂಭವಿಸಿದ ಸುಮಾರು ಎರಡು ವಾರಗಳ ನಂತರ ಹೆಚ್ಚಿನ ಪ್ರಾಂತ್ಯಗಳಲ್ಲಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆ ಅಂತ್ಯಗೊAಡಿವೆ ಎಂದು ಟರ್ಕಿಶ್ ವಿಪತ್ತು ಮತ್ತು ತುರ್ತು ನಿರ್ವಹಣಾ ಪ್ರೆಸಿಡೆನ್ಸಿ (ಎಎಫ್‌ಎಡಿ) ಶನಿವಾರ ಹೇಳಿರುವುದಾಗಿ ಅಲ್ ಜಜೀರಾ ವರದಿ ಮಾಡಿದೆ.

ಆಸ್ಟೆçÃಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ಮುಂಬೈ, ಫೆ. ೧೯: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾರ್ಚ್ ೧೭ ರಿಂದ ಆರಂಭವಾಗಲಿರುವ ಆಸ್ಟೆçÃಲಿಯಾ ವಿರುದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ತಂಡವನ್ನು ಭಾನುವಾರ ಪ್ರಕಟಿಸಿದ್ದು, ಹಾರ್ದಿಕ್ ಪಾಂಡ್ಯಗೆ ತಂಡದ ನಾಯಕತ್ವ ನೀಡಲಾಗಿದೆ. ಇದರೊಂದಿಗೆ ಟಿ೨೦ ತಂಡದ ನಾಯಕತ್ವದ ಬಳಿಕ ಇದೀಗ ಮೊದಲ ಬಾರಿಗೆ ಹಾರ್ದಿಕ್ ಪಾಂಡ್ಯ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಏಕದಿನ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ಮೊದಲ ಪಂದ್ಯಕ್ಕೆ ಅಲಭ್ಯರಾಗಲಿದ್ದು, ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯವನ್ನು ಮುನ್ನಡೆಸಲಿದ್ದಾರೆಂದು ಬಿಸಿಸಿಐ ತಿಳಿಸಿದೆ.

೧೦ ರೋಹಿಂಗ್ಯಾಗಳು ಸೇರಿ ೧೩ ಮಂದಿ ಬಂಧನ

ಅಗರ್ತಲಾ, ಫೆ. ೧೯: ಹತ್ತು ರೋಹಿಂಗ್ಯಾ ನಿರಾಶ್ರಿತರು, ಇಬ್ಬರು ಬಾಂಗ್ಲಾದೇಶೀಯರು ಮತ್ತು ಓರ್ವ ‘ಭಾರತೀಯ ಹ್ಯಾಂಡ್ಲರ್' ನನ್ನು ಅಗರ್ತಲಾ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ವಿಚಾರಣೆಯ ನಂತರ ರೋಹಿಂಗ್ಯಾಗಳು ಬಾಂಗ್ಲಾದೇಶದ ಕಾಕ್ಸ್ ಬಜಾರ್ ಶಿಬಿರದಿಂದ ಓಡಿಬಂದಿದ್ದು, ಭಾರತವನ್ನು ಅಕ್ರಮವಾಗಿ ಪ್ರವೇಶಿಸಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಸರ್ಕಾರಿ ರೈಲ್ವೆ ಪೊಲೀಸ್ (ಜಿಆರ್‌ಪಿ) ಅಧಿಕಾರಿ ಹೇಳಿದ್ದಾರೆ. ಈ ಎಲ್ಲಾ ೧೩ ಮಂದಿ ಕೋಲ್ಕತ್ತಾಗೆ ಹೋಗಲು ಕಾಂಚನಜುAಗಾ ಎಕ್ಸ್ಪ್ರೆಸ್ ರೈಲಿಗಾಗಿ ಕಾಯುತ್ತಿದ್ದರು ಎಂದು ಜಿಆರ್‌ಪಿ ಪೊಲೀಸ್ ವರಿಷ್ಠಾಧಿಕಾರಿ ಅಮಿತಾಭ್ ಪಾಲ್ ಅವರು ತಿಳಿಸಿದ್ದಾರೆ. ಫೆಬ್ರವರಿಯಲ್ಲಿ ಅಗರ್ತಲಾ ರೈಲು ನಿಲ್ದಾಣದಲ್ಲಿ ಬಂಧಿತರಾದ ರೋಹಿಂಗ್ಯಾಗಳ ಒಟ್ಟು ಸಂಖ್ಯೆ ಈಗ ೩೩ಕ್ಕೆ ಏರಿಕೆಯಾಗಿದೆ. ಅವರಲ್ಲಿ ಮೂವರು ಮಕ್ಕಳು ಸೇರಿದ್ದಾರೆ.

‘ಚಿರತೆಗಳ ಆಗಮನದಿಂದ ಭಾರತದ ಜೀವವೈವಿಧ್ಯಕ್ಕೆ ಉತ್ತೇಜನ’

ನವದೆಹಲಿ, ಫೆ. ೧೯: ದಕ್ಷಿಣ ಆಫ್ರಿಕಾದಿಂದ ಇನ್ನೂ ೧೨ ಚಿರತೆಗಳ ಆಗಮನದಿಂದ ಭಾರತದ ಜೀವವೈವಿಧ್ಯಕ್ಕೆ ಉತ್ತೇಜನ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ಈ ಬೆಳವಣಿಗೆಯೊಂದಿಗೆ ಭಾರತದ ವನ್ಯಜೀವಿ ವೈವಿಧ್ಯತೆಯು ಉತ್ತೇಜನವನ್ನು ಪಡೆಯುತ್ತದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಪರಿಸರ ಸಚಿವ ಭೂಪೇಂದರ್ ಯಾದವ್ ಅವರು ತಾ. ೧೮ ರಂದು ಮಾಡಿದ ಟ್ವೀಟ್‌ಗೆ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಾರಂಭವಾದ ಚೀತಾ ಯೋಜನೆಯು ಇಂದು ಕುನೋ ರಾಷ್ಟಿçÃಯ ಉದ್ಯಾನದಲ್ಲಿ ಮತ್ತೊಂದು ಮೈಲಿಗಲ್ಲನ್ನು ತಲುಪಿದೆ. ಮಧ್ಯ ಪ್ರದೇಶದ ಸಿಎಂ ಶಿವರಾಜ್ ಚೌಹಾಣ್ ಮತ್ತು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಸಮ್ಮುಖದಲ್ಲಿ ೧೨ ಚಿರತೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಯಾದವ್ ಶನಿವಾರ ಟ್ವೀಟ್ ಮಾಡಿದ್ದಾರೆ.

ಪಾಕಿಸ್ತಾನ ದಿವಾಳಿ

ನವದೆಹಲಿ, ಫೆ. ೧೯: ಪಾಕಿಸ್ತಾನ ದಿವಾಳಿಯಾಗಿದೆ ಎಂದು ಅಲ್ಲಿನ ರಕ್ಷಣಾ ಸಚಿವ ಖಾವಾಜಾ ಆಸೀಫ್ ಹೇಳಿದ್ದಾರೆ. ಪಾಕಿಸ್ತಾನದ ಇಂದಿನ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಗೆ ಅಧಿಕಾರಿಗಳು ಹಾಗೂ ರಾಜಕಾರಣಿಗಳನ್ನು ಖಾವಾಜಾ ಹೊಣೆಗಾರರನ್ನಾಗಿ ದೂಷಿಸಿದ್ದಾರೆ. ಸಿಯಾಲ್ ಕೋಟ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಖಾವಾಜಾ, ತನ್ನನ್ನು ತಾನು ಸ್ಥಿರಪಡಿಸಿಕೊಳ್ಳಲು ತನ್ನ ಕಾಲಮೇಲೆ ನಿಂತುಕೊಳ್ಳುವುದು ಅತ್ಯಗತ್ಯ ಎಂದು ಹೇಳಿದ್ದಾರೆ. ಪಾಕಿಸ್ತಾನ ದಿವಾಳಿಯಾಗುತ್ತದೆ ಎಂದು ಹೇಳುವುದನ್ನು ನೀವು ಕೇಳಿರುತ್ತೀರಿ, ಅದರೆ ಪಾಕಿಸ್ತಾನ ಈಗಾಗಲೇ ದಿವಾಳಿಯಾಗಿ ಆಗಿದೆ. ನಾವು ದಿವಾಳಿಯಾಗಿರುವ ದೇಶದಲ್ಲೇ ವಾಸಿಸುತ್ತಿದ್ದೇವೆ ಎಂದು ಸಚಿವ ಖಾವಾಜ ಹೇಳಿದ್ದಾರೆ.