ಕೂಡಿಗೆ, ಫೆ. ೧೯: ಇಲ್ಲಿಗೆ ಸಮೀಪದ ಹೆಬ್ಬಾಲೆಯಲ್ಲಿ ಬಿ.ಜೆ.ಪಿ.ಯ ಬೂತ್ ಸಮಿತಿಯ ವತಿಯಿಂದ ಕೂಡುಮಂಗಳೂರು ಪಂಚಾಯಿತಿ ಉಪಾಧ್ಯಕ್ಷ ಭಾಸ್ಕರ್ ನಾಯಕ್ ಹಾಗೂ ಹೆಬ್ಬಾಲೆ ಗ್ರಾ.ಪಂ. ಉಪಾಧ್ಯಕ್ಷೆ ಅರುಣ ಕುಮಾರಿ ನೇತೃತ್ವದಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಹೆಬ್ಬಾಲೆ ವಲಯದ ಬಿಜೆಪಿ ಕಾರ್ಯಕರ್ತರು ಹಾಗೂ ಜನಪ್ರತಿನಿಧಿ ಗಳು ಹಾಗೂ ಸಾರ್ವಜನಿಕರು ಸೇರಿದಂತೆ ಬಿಜೆಪಿಯ ವಿವಿಧ ಘಟಕಗಳ ಪದಾಧಿಕಾರಿಗಳು, ಸಂತೆಯ ಗ್ರಾಹಕರಿಗೆ ಮತ್ತು ವ್ಯಾಪಾರಸ್ಥರಿಗೆ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿನ ಹಲವು ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳ ಬಗ್ಗೆ ಕರಪತ್ರಗಳನ್ನು ನೀಡುವ ಮೂಲಕ ಮನವರಿಕೆ ಮಾಡಿಕೊಟ್ಟರು.

ಈ ಸಂದರ್ಭ ಹೆಬ್ಬಾಲೆ ಗ್ರಾಮ ಪಂಚಾಯಿತಿ ಸದಸ್ಯರಾದ ಪರಮೇಶ, ಲತಾ, ರತ್ನಮ್ಮ, ಬೂತ್ ಸಮಿತಿಯ ಅಧ್ಯಕ್ಷ ರವಿ, ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು ಹಾಜರಿದ್ದರು.