ಮುಳ್ಳೂರು, ಫೆ. ೨೦: ಸಮಿಪದ ನಿಡ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಬಾರ್ಡ್ ಸಾಲ ಸಹಾಯಧನದಿಂದ ನಿರ್ಮಿಸಲಾದ ನೂತನ ಗೋದಾಮು ಕಟ್ಟಡ ಉದ್ಘಾಟನಾ ಕಾರ್ಯಕ್ರಮವು ತಾ. ೨೨ ರಂದು ನಡೆಯಲಿದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.
ತಾ. ೨೨ ರಂದು ಬೆಳಿಗ್ಗೆ ೧೧ ಗಂಟೆಗೆ ಸಂಘದ ಅಧ್ಯಕ್ಷ ಎನ್.ಬಿ.ನಾಗಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನೂತನ ಗೋದಾಮು ಕಟ್ಟಡವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ಉದ್ಘಾಟಿಸಲಿದ್ದು, ಸಮಾರಂಭವನ್ನು ಕೆಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೇಟೋಳಿರ ಎಸ್.ಹರೀಶ್ ಪೂವಯ್ಯ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೆಡಿಸಿಸಿ ಬ್ಯಾಂಕ್ ನಿರ್ದೇಶಕರುಗಳಾದ ಬಿ.ಕೆ.ಚಿಣ್ಣಪ್ಪ, ಬಿ.ಡಿ.ಮಂಜುನಾಥ್, ಎಸ್.ಬಿ.ಭರತ್‌ಕುಮಾರ್, ಸಹಕಾರ ಸಂಘಗಳ ಉಪನಿಬಂಧಕ ಎಂ.ಎಸ್.ಕೃಷ್ಣಪ್ರಸಾದ್, ನಬಾರ್ಡ್ ಜಿಲ್ಲಾ ಡಿ.ಡಿ.ಎಂ ರಮೇಶ್‌ಬಾಬು, ಸಹಕಾರ ಸಂಘಗಳ ಸಹಾಯಕ ನಿಬಂಧಕ ಎಂ.ಈ.ಮೋಹನ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ.