ಮಡಿಕೇರಿ, ಫೆ. ೨೦: ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘÀದ ವಾರ್ಷಿಕ ಮಹಾಸಭೆ ತಾ. ೨೮ರಂದು ನಗರದ ಪೊಲೀಸ್ ಮೈತ್ರಿ ಭವನದಲ್ಲಿ ನಡೆಯಲಿದೆ ಎಂದು ಸಂಘದ ಉಪಾಧ್ಯಕ್ಷÀ ಬಿ.ಆರ್. ಲಿಂಗಪ್ಪ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಹಾಸಭೆ ಅಂದು ಬೆಳಿಗ್ಗೆ ೧೦ ಗಂಟೆಗೆ ಸಂಘದ ಅಧ್ಯಕ್ಷರಾದ ಎ.ಕೆ. ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ವಿಶೇಷ ಆಹ್ವಾನಿತರಾಗಿ ಬೆಂಗಳೂರಿನ ಕರ್ನಾಟಕ ರಾಜ್ಯ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಅಧ್ಯಕ್ಷರಾದ ಬಿ.ಕೆ.ಶಿವರಾಮ್, ರಾಜ್ಯ ಕಾರ್ಯದರ್ಶಿ ಕುಮಾರ್ ಎಸ್. ಕರ್ನಿಂಗ್, ಮೈಸೂರು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘÀದ ಅಧ್ಯಕ್ಷರಾದ ಮರಿಸ್ವಾಮಿ, ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಗೌರವಾಧ್ಯಕ್ಷರಾದ ಎಂ.ಎ.ಅಪ್ಪಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಮಹಾಸಭೆಯಲ್ಲಿ ಸಂಘÀದ ಹಿರಿಯ ೧೦ ಮಂದಿ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಮತ್ತು ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕ ಗಳಿಸಿದ ಸಂಘÀದ ಸದಸ್ಯರ ಇಬ್ಬರು ಮಕ್ಕಳ ಪ್ರತಿಭಾ ಪುರಸ್ಕಾರ ನಡೆಯಲಿದೆ. ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಲ್ಲಿ ೯೨೫ ಸದಸ್ಯರುಗಳಿದ್ದಾರೆ. ಇವರುಗಳು ಯೋಗ್ಯ ಆರೋಗ್ಯ ಸೇವೆಯನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ‘ಆರೋಗ್ಯ ಭಾಗ್ಯ’ ಯೋಜನೆಗೆ ಒಳಪಡುವುದು ಅವಶ್ಯ. ಈಗಾಗಲೆ ಸಾಕಷ್ಟು ಸದಸ್ಯರು ಆರೋಗ್ಯ ಸೇವೆಯ ಸೌಲಭ್ಯ ಪಡೆಯುತ್ತಿದ್ದಾರೆ. ಮತ್ತಷ್ಟು ಮಂದಿ ಇನ್ನೂ ಇದರ ವ್ಯಾಪ್ತಿಗೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಸದಸ್ಯರು ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಸಂಘದ ಮೂಲಕ ಆರೋಗ್ಯ ಸೇವೆಗೆ ಒಳಪಡುವಂತೆ ಮನವಿ ಮಾಡಿದರು. ಈ ಬಗ್ಗೆ ದೂ. ೯೯೭೨೨೬೫೨೯೬ ನ್ನು ಸಂಪರ್ಕಿಸಬಹುದೆAದು ತಿಳಿಸಿದರು.
ಜಿಲ್ಲೆಯಲ್ಲಿರುವ ಸಾಕಷ್ಟು ನಿವೃತ್ತ ಪೊಲೀಸ್ ಅಧಿಕಾರಿಗಳು ಇನ್ನೂ ಸಂಘÀದ ಸದಸ್ಯತ್ವವನ್ನು ಪಡೆದುಕೊಂಡಿಲ್ಲ. ಮಹಾಸಭೆಯ ಸಂದರ್ಭ ಸದಸ್ಯತ್ವವನ್ನು ಹೊಂದಿಕೊಳ್ಳಬೇಕೆAದು ಬಿ.ಆರ್.ಲಿಂಗಪ್ಪ ಅವರು ಮನವಿ ಮಾಡಿದರು. ಗೋಷ್ಠಿಯಲ್ಲಿ ಸಂಘÀದ ಕಾರ್ಯದರ್ಶಿ ಅಚ್ಚುತನ್ ನಾಯರ್, ಖಜಾಂಚಿ ಬಿ.ಎಂ.ಭೀಮಯ್ಯ, ನಿರ್ದೇಶಕರಾದ ಎಂ.ಕೆ.ಕಾವೇರಪ್ಪ ಮತ್ತು ಸಿ.ಟಿ.ಚೀಯಣ್ಣ ಉಪಸ್ಥಿತರಿದ್ದರು.