ಮುಳ್ಳೂರು, ಫೆ. ೧೯: ಸಮೀಪದ ಆಲೂರು-ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯ ಮಾಲಂಬಿ ಗ್ರಾಮದ ಶ್ರೀ ಕನ್ನಂಬಾಡಿ ಅಮ್ಮನವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ರೂ. ೫ ಲಕ್ಷ ಅನುದಾನ ಬಿಡುಗಡೆಗೊಳಿಸಿದ್ದಾರೆ.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಜೀರ್ಣೋದ್ಧಾರ ಕಾಮಗಾರಿಗೆ ಅನುದಾನ ಕೋರಿ ಮನವಿ ಸಲ್ಲಿಸಿದ್ದ ಹಿನ್ನೆಲೆ ಸ್ಪಂದಿಸಿದ ಶಾಸಕರು ಜೀರ್ಣೋದ್ಧಾರ ಕಾಮಗಾರಿಗೆ ಮುಜರಾಯಿ ಇಲಾಖೆ ಮೂಲಕ ರೂ. ೫ ಲಕ್ಷ ಮಂಜೂರು ಮಾಡಿದ್ದು, ಈಗ ಮೊದಲ ಕಂತಿನಲ್ಲಿ ರೂ. ೨.೫೦ ಲಕ್ಷ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಬ್ಯಾಂಕ್ ಖಾತೆಗೆ ಜಮಾಗೊಂಡಿದೆ. ಉಳಿದ ರೂ. ೨.೫೦ ಲಕ್ಷವನ್ನು ಸದ್ಯದಲ್ಲೇ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಬ್ಯಾಂಕ್ ಖಾತೆಗೆ ಜಮಾವಾಗಲಿದೆ ಎಂದು ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದೆ.