ಮಡಿಕೇರಿ, ಫೆ. ೧೯: ಜಿಲ್ಲೆಗೆ ನೂತನವಾಗಿ ಆಗಮಿಸಿರುವ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಉಪಾಧ್ಯಕ್ಷ ಕೆ. ರಾಮರಾಜನ್ ಅವರನ್ನು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ನ ಪ್ರಧಾನ ಆಯುಕ್ತ ಕೆ.ಟಿ. ಬೇಬಿಮ್ಯಾಥ್ಯು ಅವರು ಕಂಠವಸ್ತç ಹಾಕುವುದರ ಮೂಲಕ ಜಿಲ್ಲಾ ಸಂಸ್ಥೆಗೆ ಸ್ವಾಗತಿಸಿದರು. ಈ ಸಂದರ್ಭ ಸ್ಕೌಟ್ಸ್ ಆಯುಕ್ತ ಜಿಮ್ಮಿ ಸ್ವಿಕೇರಾ, ಸ್ಥಾನಿಕ ಆಯುಕ್ತ ಹೆಚ್.ಆರ್. ಮುತ್ತಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎA. ವಸಂತಿ, ಜಿಲ್ಲಾ ಸಂಘಟಕಿ ಯು.ಸಿ. ದಮಯಂತಿ ಹಾಗೂ ಜಿಲ್ಲಾ ಸಹಕಾರ್ಯದರ್ಶಿ ಬೊಳ್ಳಜಿರ ಬಿ. ಅಯ್ಯಪ್ಪ ಇತರರು ಇದ್ದರು.