ಮಡಿಕೇರಿ, ಫೆ. ೨೦: ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಮುಖ್ಯಸ್ಥರಾಗಿದ್ದ ಕೊಡಗಿನವರಾದ ಡಾ. ತಂಬAಡ ವಿಜಯ್ ಪೂಣಚ್ಚ ಅವರು ಇದೀಗ ವಿಶ್ವವಿದ್ಯಾನಿಲಯದ ಹಂಗಾಮಿ ಉಪಕುಲಪತಿಗಳಾಗಿ ಆಯ್ಕೆಗೊಂಡಿದ್ದಾರೆ. ಈ ಬಗ್ಗೆ ಕುಲಪತಿಗಳಾದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆದೇಶದನ್ವಯ ವಿಶ್ವವಿದ್ಯಾನಿಲಯಗಳ ಸರಕಾರದ ಅಧೀನ ಕಾರ್ಯದರ್ಶಿ ಎನ್. ಶಿವಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ.