ಮಡಿಕೇರಿ, ಫೆ. ೧೯: ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. ೨೧ ರಂದು ನಗರದ ಸುದರ್ಶನ ಅತಿಥಿ ಗೃಹದಲ್ಲಿ ಮತ್ತು ತಾ. ೨೨ ರಂದು ಕುಶಾಲನಗರದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಆಯಾಯ ದಿನಗಳಂದು ಬೆಳಿಗ್ಗೆ ೧೧ ಗಂಟೆಯಿAದ ೧ ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ.೦೮೨೭೨-೨೯೫೨೯೭ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.