ಚೆಟ್ಟಳ್ಳಿ, ಫೆ. ೨೦: ಜಾತಿ, ಧರ್ಮ, ಬಡವ ಶ್ರೀಮಂತ ಎನ್ನುವ ಭೇದಭಾವ ಹಾಗೂ ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ನಿರ್ಮಾಣವಾಗಿರುವ ಎಲ್ಲಾ ಅಂತರವನ್ನು ಒಂದುಗೂಡಿಸುವ ಶಕ್ತಿ ಕ್ರೀಡೆಗೆ ಮಾತ್ರ ಇದೆ ಎಂದು ಹೈಕೋರ್ಟ್ ಹಿರಿಯ ವಕೀಲ ಹಾಗೂ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್ ಪೊನ್ನಣ್ಣ ಅಭಿಪ್ರಾಯಪಟ್ಟರು. ಮೂರು ದಿನಗಳ ಕಾಲ ನಡೆಯುವ ಅಯ್ಯಂಗೇರಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯನ್ನು ಎ.ಎಸ್. ಪೊನ್ನಣ್ಣ ಉದ್ಘಾಟಿಸಿ ಮಾತನಾಡಿದರು.

ಕೊಡಗು ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಹಲವಾರು ಕ್ರೀಡಾಪಟುಗಳು ಇದ್ದಾರೆ. ಗ್ರಾಮ ಮಟ್ಟದಲ್ಲಿ ಸರಿಯಾದ ಕ್ರೀಡಾ ಸೌಕರ್ಯಗಳು ಇಲ್ಲದೆ, ಕ್ರೀಡಾ ಕ್ಷೇತ್ರದಲ್ಲಿ ಮುಂದವರಿಯಲು ಸಾಧ್ಯವಾಗುತ್ತಿಲ್ಲ. ಕೊಡಗು ಜಿಲ್ಲೆ ಕ್ರೀಡೆಯಲ್ಲಿ ಅಂರ‍್ರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿದೆ. ಆದರೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕ್ರೀಡೆಗೆ ಬೇಕಾದ ಸೌಲಭ್ಯಗಳ ಕೊರತೆ ಇದೆ ಎಂದು ಬೇಸರ ವ್ಯಕ್ತಪಡಿಸಿದರು.

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಗದ್ದೆಗಳನ್ನು ಮೈದಾನವನ್ನಾಗಿ ನಿರ್ಮಿಸಿ ಆಟ ಆಡುವ ಪರಿಸ್ಥಿತಿ ಇದೆ ಎಂದು ವಿಷಾಧಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ತಿತೀರ ಧರ್ಮಜ ಉತ್ತಪ್ಪ ಮಾತನಾಡಿದರು.

ಮೂರು ದಿನಗಳ ಕಾಲ ನಡೆಯುವ ಅಯ್ಯಂಗೇರಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಸೀಜನ್-೦೭ ಕ್ರೀಡಾಕೂಟದಲ್ಲಿ ೮ ತಂಡಗಳು ಪ್ರಶಸ್ತಿಗಾಗಿ ಸೆಣಸಾಟ ನಡೆಸುತ್ತಿವೆ. ೧೫೦ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ.

ಅಯ್ಯAಗೇರಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಆಯೋಜಕರು, ಅಯ್ಯಂಗೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೊಹಮ್ಮದ್ ಹಾಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಅಯ್ಯಂಗೇರಿ ಗ್ರಾಮ ಪಂಚಾಯಿತಿ ಸದಸ್ಯ ಹಾಗೂ ರಾಜ್ಯ ಎನ್.ಎಸ್.ಯು.ಐ. ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಾಶಿದ್, ಅಯ್ಯಂಗೇರಿ ಗ್ರಾಮ ಪಂಚಾಯಿತಿ ಸದಸ್ಯರಾದ ಎಸ್. ಚಂಗಪ್ಪ, ಕಾವೇರಮ್ಮ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮನೋಜ್ ಕುಮಾರ್, ಯುವ ನಟ ಕಿರಣ್ ಸೋಮಣ್ಣ, ಸಮಾಜ ಸೇವಕ ಉದ್ದಿಮಂಡ ಪೃಥ್ವಿ, ನಾಪೋಕ್ಲು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸಿರಾಜ್ ಪರವಂಡ, ಚೆಟ್ಟಿಮಾನಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿಶು, ಸದಸ್ಯ ಹಾರಿಸ್ ಚೆಟ್ಟಿಮಾನಿ ಹಾಗೂ ಇನ್ನಿತರರು ಇದ್ದರು.