ಚೆಯ್ಯಂಡಾಣೆ, ಫೆ. ೧೯: ನರಿಯಂದಡ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಅಧ್ಯಕ್ಷತೆಯಲ್ಲಿ ಸ್ಥಳೀಯ ಲಕ್ಷಿö್ಮ ಮಹಿಳಾ ಸಮಾಜದಲ್ಲಿ ನಡೆಯಿತು.
ಸಾರ್ವಜನಿಕರ ಪರವಾಗಿ ಚೇನಂಡ ಜೆಪ್ಪು ದೇವಯ್ಯ ಮಾತನಾಡಿ ಕೋಕೇರಿಯಲ್ಲಿ ಕಳೆದ ಒಂದು ವರ್ಷದಿಂದ ವಿದ್ಯುತ್ ಸಮಸ್ಯೆ, ಲೈನ್ ಮ್ಯಾನ್ ಸಮಸ್ಶೆ ಬಗ್ಗೆ ಈ ಹಿಂದಿನ ಗ್ರಾಮ ಸಭೆಯಲ್ಲಿ ಪ್ರಸ್ತಾಪಿಸಿ ಸಮಸ್ಯೆ ಪರಿಹರಿಸುವ ಬಗ್ಗೆ ಭರವಸೆ ಕೊಟ್ಟ ಚೆಸ್ಕಾಂ ಇಲಾಖೆಯವರು ಕೋಕೇರಿ ಭಾಗಕ್ಕೆ ಬರಲಿಲ್ಲ ಎಂದು ತಮ್ಮ ಆಕ್ರೋಶ ಹೊರಹಾಕಿದರು. ಚೆಯ್ಯಂಡಾಣೆ ಸರಕಾರಿ ಆಸ್ಪತ್ರೆಯಲ್ಲಿ ಖಾಯಂ ವೈದ್ಯಾಧಿಕಾರಿ ಇಲ್ಲ ಹಾಗೂ ಕಂದಾಯ ಇಲಾಖೆಯಷ್ಟು ಭ್ರಷ್ಟ ಇಲಾಖೆ ಮತ್ತೊಂದಿಲ್ಲ ಎಂದು ಕಂದಾಯ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದು ಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಚೆಸ್ಕಾಂ ಜೂನಿಯರ್ ಇಂಜಿನಿಯರ್ ಪ್ರಕಾಶ್ ಕೂಡಲೇ ಇದರ ಬಗ್ಗೆ ಕ್ರಮ ಕೈಗೊಂಡು ಸಮಸ್ಯೆಗಳನ್ನು ಪರಿಹರಿಸಲಾಗುವು ದೆಂದು ಭರವಸೆ ನೀಡಿದರು.
ಕಂದಾಯ ಇಲಾಖೆಯ ಬಗ್ಗೆ ಅಧಿಕಾರಿ ಅಮೃತ ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲಾಗುವು ದೆಂದು ಭರವಸೆ ನೀಡಿದರು.
ಚೆಯ್ಯಂಡಾಣೆ ಪಾರಾಣೆ ರಸ್ತೆಯ ದುರಾವಸ್ಥೆಯ ಬಗ್ಗೆ ಸಭೆಯಲ್ಲಿ ಬೆಳಿಯಂಡ್ರ ಬೆಳ್ಳಿಯಪ್ಪ ಮಾತನಾಡಿ ಕೂಡಲೇ ಕಾಮಗಾರಿ ಆರಂಭಿಸುವAತೆ ಸಂಬAಧಪಟ್ಟ ಇಲಾಖೆಗೆ ಒತ್ತಾಯಿಸಿದರು.
ಕರಡ ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗವಿಲ್ಲ ಎಂಬ ಗ್ರಾಮಸ್ಥರ ಕೋರಿಕೆಗೆ ಧ್ವನಿಗೂಡಿಸಿದ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಕಂದಾಯ ಇಲಾಖೆ ಕೂಡಲೇ ಕರಡ ಗ್ರಾಮದಲ್ಲಿ ಇರುವ ಸರಕಾರಿ ಜಾಗವನ್ನು ಗೊತ್ತುಪಡಿಸಿ ೧೫ ದಿನಗಳ ಒಳಗೆ ಗ್ರಾಮ ಪಂಚಾಯಿತಿಗೆ ತಿಳಿಸಿದಲ್ಲಿ ಸೂಕ್ತ ಸ್ಥಳವನ್ನು ಆಯ್ಕೆ ಮಾಡಿ ಸ್ಮಶಾನಕ್ಕೆ ಒದಗಿಸಲಾಗುವುದು ಎಂದರು. ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಮಾತನಾಡಿ, ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, ಕುಡಿಯುವ ನೀರಿನ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜೆ.ಜೆ.ಎಂ. ಅಧಿಕಾರಿ ತೌಸಿಫ್ ಅವರಿಗೆ ಸೂಚಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿದ್ದಂಡ ರಾಜೇಶ್ ಅಚ್ಚಯ್ಯ ಮಾತನಾಡಿ ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರ ವಿದ್ಯುತ್ ಸಮಸ್ಯೆ, ಲೈನ್ಮ್ಯಾನ್ ಸಮಸ್ಯೆ, ಹಲವಾರು ವಿದ್ಯುತ್ ಅವಘಡ ಸಂಭವಿಸಿದರೂ ಸಹ ವಿದ್ಯುತ್ ಕಂಬ ಬದಲಾಯಿಸಿಲ್ಲ, ಬದಲಾಯಿಸಲು ತಂದ ವಿದ್ಯುತ್ ಕಂಬ ಬೇರೆಡೆ ಸ್ಥಳಾಂತರಿಸಿದ್ದಾರೆ, ಹೀಗೆ ಹಲವಾರು ಸಮಸ್ಯೆಗಳನ್ನು ಚೆಸ್ಕಾಂ ಇಲಾಖೆಯ ಅಧಿಕಾರಿ ಪ್ರಕಾಶ್ ಅವರಿಗೆ ಮಾಹಿತಿ ನೀಡಿದರು. ಸಮಸ್ಯೆ ಪರಿಹಾರಕ್ಕೆ ೧೫ ದಿನಗಳ ಗಡುವ ನೀಡಿದ್ದು ಸಮಸ್ಯೆ ಪರಿಹರಿಸದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದರು.
ಗ್ರಾಮ ಸಭೆಯಲ್ಲಿ ಕೃಷಿ ಇಲಾಖೆಯಿಂದ ದೊರೆಯುವ ಎಲ್ಲ ಸೌಲಭ್ಯಗಳ ಬಗ್ಗೆ ಕೃಷಿ ಇಲಾಖೆಯ ಅಧಿಕಾರಿ ನಾರಾಯಣ ರೆಡ್ಡಿ ಮಾಹಿತಿ ನೀಡಿದರು. ಅರಣ್ಯ ಇಲಾಖೆಯಿಂದ ದೊರೆಯುವ ಸೌಲಭ್ಯದ ಬಗ್ಗೆ ಅರಣ್ಯಾಧಿಕಾರಿ ಅಕ್ಕಮ್ಮ ಮಾಹಿತಿ ನೀಡಿದರು. ಪಶು ಇಲಾಖೆಯ ಬಗ್ಗೆ ಪಶು ವೈದ್ಯಾಧಿಕಾರಿ ಪಳಂಗಪ್ಪ, ಶಿಶು ಇಲಾಖೆಯ ಬಗ್ಗೆ ಸೀತಾ ಲಕ್ಷಿö್ಮ ಹಾಗೂ ವಿವಿಧ ಇಲಾಖೆಗಳ ಬಗ್ಗೆ ಸಂಬAಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಬಿ.ಎಸ್.ಪುಷ್ಪ, ನೋಡೆಲ್ ಅಧಿಕಾರಿ ಸೀತಾ ಲಕ್ಷ್ಮಿ,ಗ್ರಾಮ ಪಂಚಾಯಿತಿ ಸದಸ್ಯರು, ಸಂಜೀವಿನಿ ಒಕ್ಕೂಟದ ಸದಸ್ಯರು,ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಸಭೆಯಲ್ಲಿ ಸ್ಥಳೀಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರೆ, ಸ್ವಾಗತವನ್ನು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಬಿದ್ದಪ್ಪ ವಂದನೆಯನ್ನು ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ನೆರವೇರಿಸಿದರು.