ಕೂಡಿಗೆ, ಫೆ. ೨೦: ಗ್ರಾಮೀಣ ಭಾಗದ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಅಳುವಾರ ಗ್ರಾಮದ ಶ್ರೀ ಅಳುವಾರದಮ್ಮ ದೇವಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ’ದ ಮಾತನಾಡಿದ ಅವರು, ಕುಡಿಯುವ ನೀರು ಪೂರೈಕೆ, ಬೀದಿ ದೀಪ ಅಳವಡಿಕೆ, ಹದಗೆಟ್ಟ ಸಂಪರ್ಕ ರಸ್ತೆಗಳ ದುರಸ್ತಿ ಕಾರ್ಯಕ್ಕೆ ಒತ್ತು ನೀಡಲಾಗುತ್ತದೆ. ಮೂಲಭೂತ ಸೌಲಭ್ಯ ಒದಗಿಸುವುದು ಜಿಲ್ಲಾಡಳಿತದ ಆದ್ಯತೆಯಾಗಿದೆ ಎಂದರು.

ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಣಿಗಾರಿಕೆಯು ನಡೆಯುತ್ತಿರುವುದರಿಂದ ಗ್ರಾಮಸ್ಥರಿಗೆ ತೊಂದರೆ ಆಗುತ್ತಿದೆ. ಆದರೆ, ಸಮರ್ಪಕ ಕ್ರಮವಹಿಸದೆ ಅಧಿಕಾರಿಗಳು ನಿರ್ಲಕ್ಷö್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರಾದ. ಟಿ.ಕೆ ಪಾಂಡುರAಗ, ವೆಂಕಟೇಶ್, ಗಣೇಶ್ ಸೇರಿದಂತೆ ಹಲವು ಮಂದಿ ಜಿಲ್ಲಾಧಿಕಾರಿಯ ಗಮನಕ್ಕೆ ತಂದರು. ಈ ಬಗ್ಗೆ ಸೂಕ್ತ ಕ್ರಮವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಕೆರೆ ಒತ್ತುವರಿ : ಒತ್ತುವರಿ ಯಾಗಿರುವ ಕೆರೆಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಸರಕಾರದ ತೀರ್ಮಾನದಂತೆ ಜಿಲ್ಲೆಯಲ್ಲಿ ಈಗಾಗಲೇ ೫೮೪ ಕೆರೆಗಳ ಸರ್ವೆ ಕಾರ್ಯ ನಡೆಯುತ್ತಿದೆ. ಒತ್ತುವರಿ ಆಗಿರುವ ಜಾಗವನ್ನು ತೆರವುಗೊಳಿಸಿ ಅದರ ಉಸ್ತುವಾರಿಯನ್ನು ಆಯಾ ಗ್ರಾಮ ಪಂಚಾಯತಿಗಳಿಗೆ ವಹಿಸಲಾಗುತ್ತದೆ. ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ೬ ಕೆರೆಗಳ ಸರ್ವೆ ಕಾರ್ಯ ಬಾಕಿ ಇದ್ದು ಅದನ್ನು ನಿಯಮಾನುಸಾರ ಸರ್ವೆ ನಡೆಸಿ ಒತ್ತುವರಿ ಆಗಿರುವ ಜಾಗವನ್ನು ತೆರವುಗೊಳಿಸಿ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸ ಲಾಗುವುದು ಎಂದು ಭರವಸೆ ನೀಡಿದರು.

ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ೫ ಗ್ರಾಮಗಳಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಂಡು ವಾಸಿಸುತ್ತಿರುವ ೨೦೦ ಕ್ಕೂ ಹೆಚ್ಚು ಗ್ರಾಮಸ್ಥರಿಗೆ ಅರಣ್ಯ ಹಕ್ಕು ಸಮಿತಿಯ ಅಡಿಯಲ್ಲಿ ಹಕ್ಕುಪತ್ರವನ್ನು ನೀಡುವಂತೆ ನೂರಾರು ಗ್ರಾಮಸ್ಥರು ಒತ್ತಾಯಿಸಿದರು. ಸೂಕ್ತ ಕ್ರಮದ ಭರವಸೆಯನ್ನು ಜಿಲ್ಲಾಧಿಕಾರಿ ನೀಡಿದರು.

ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ದಾಳಿಯಿಂದ ನಾಶವಾದ ಕೃಷಿಗೆ ಅಲ್ಪಪ್ರಮಾಣದ ಪರಿಹಾರ ನೀಡಲಾಗುತ್ತಿದ್ದು, ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು ಎಂದು ರೈತರು ಆಗ್ರಹಿಸಿದರು.

ತೊರೆನೂರು ಗ್ರಾಮದ ಮುಖ್ಯ ರಸ್ತೆಯಿಂದ ಚಿಕ್ಕಅಳುವಾರದ ಸ್ನಾತಕೋತ್ತರ ಪದವಿ ಕೇಂದ್ರದವರೆಗಿನ ರಸ್ತೆಯ ನಿರ್ಮಾಣಕ್ಕೆ ಸಂಬAಧಿಸಿ ದಂತೆ ರಸ್ತೆಯ ಎರಡು ಕಡೆಗಳಲ್ಲಿ ಒತ್ತುವರಿ ಆಗಿರುವ ಜಾಗವನ್ನು ತೆರವು ಗೊಳಿಸಿ ಕೊಂಡಬೇಕೆAದು ಗ್ರಾಮಸ್ಥರು ಮನವಿ ಮಾಡಿದರು. ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು, ಸಾರ್ವ ಜನಿಕರು ತಮ್ಮ ಗ್ರಾಮ ವ್ಯಾಪ್ತಿಯ ಸಮಸ್ಯೆಗಳ ಬಗ್ಗೆ ಅಹ ವಾಲುಗಳನ್ನು ನೀಡಿದರು.

(ಮೊದಲ ಪುಟದಿಂದ) ಸಭೆಯಲ್ಲಿ ರೈತರುಗಳು ಕೇಳಿದ ಪ್ರಶ್ನೆಗಳಿಗೆ ಸಂಬAಧಿಸಿದ ಇಲಾಖೆಯ ಅಧಿಕಾರಿಗಳು ಪರಿಹರಿಸುವ ಉತ್ತರಗಳನ್ನು ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರ ಮಾಹಿತಿಯನ್ನು ಪಡೆದ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ನಿವೇಶನ ರಹಿತರಿಗೆ ನಿವೇಶನ ನೀಡುವ ಸಂಬAಧ ಕ್ರಮ ಕೈಗೊಳ್ಳಲಾಗುವುದು ಎಂದರು. ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಯನ್ನು ಮಂಗಳವಾದ್ಯದೊAದಿಗೆ ಕಳಸ ಹೊತ್ತ ಮಹಿಳೆಯರು ಭವ್ಯ ಸ್ವಾಗತ ಕೋರಿದರು. ಮುಖ್ಯ ರಸ್ತೆಯಿಂದ ಕಾಲ್ನಡಿಗೆಯಲ್ಲಿ ನಡೆದು ಬಂದು ಅಳುವಾರದಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.

ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ, ಆಕಾಶ್, ಕುಶಾಲನಗರ ತಾಲೂಕು ತಹಶೀಲ್ದಾರ್ ಪ್ರಕಾಶ್, ಭೂ ಮತ್ತು ಗಣಿ ಇಲಾಖೆಯ ಅಧಿಕಾರಿ ಶ್ರೀನಿವಾಸ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ, ಅರೋಗ್ಯ ಕಲ್ಯಾಣಾಧಿಕಾರಿ ಡಾ, ಆನಂದ್, ಸೋಮವಾರಪೇಟೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಜಯಣ್ಣ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಜಿಲ್ಲಾ ನೋಂದಣಾಧಿಕಾರಿ ಎಸ್ ಸಿದ್ದೇಶ್, ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ನಾಗರಾಜ್, ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಂಗಧಾಮಯ್ಯ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ಹಾರಂಗಿ ನೀರಾವರಿ ಇಲಾಖೆಯ ಸಹಾಯಕ ಅಭಿಯಂತರ ಪುಟ್ಟಸ್ವಾಮಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಗ್ರಾಮದ ೧೮ ಮಂದಿಗೆ ವೃದ್ಧಾಪ್ಯ ವೇತನ, ಮತ್ತು ಇತರೆ ಮಾಸಾಶನದ ಆದೇಶ ಪತ್ರಗಳನ್ನು ವಿತರಿಸಿದರು.