ಮಡಿಕೇರಿ, ಫೆ. ೧೯: ಪೊನ್ನಂ ಪೇಟೆಯ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿAಗ್ ವಿಭಾಗದ ವತಿಯಿಂದ ೩ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಹೊಸ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವ ಸಲುವಾಗಿ ಮತ್ತು ಶೈಕ್ಷಣಿಕ ವಾತಾವರಣದಲ್ಲಿ ಯಶಸ್ಸನ್ನು ಸಾಧಿಸಲು ಸಹಾಯ ಮಾಡಲು ಇತ್ತೀಚೆಗೆ ‘ಅಡ್ವಾನ್ಸ್ಡ್ ಲ್ಯಾಬ್ ವ್ಯೂವ್’ ಸಂಬAಧ ಮೂರು ದಿನಗಳ ಕಾರ್ಯಾಗಾರವನ್ನು ನಡೆಸಿತು.
ಈ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಎಂಬೆಡೆಡ್ ಸಾಫ್ಟ್ವೇರ್ ಸ್ಪೆಷಲಿಸ್ಟ್ ಮಂಜುನಾಥ್ ಎ.ಆರ್. ಆಗಮಿಸಿ ಮಾಹಿತಿಯಿತ್ತರು. ಕೊಡವ ಎಜುಕೇಶನ್ ಸೊಸೈಟಿಯ ಅಧ್ಯಕ್ಷ ಡಾ. ಎಂ.ಸಿ. ಕಾರ್ಯಪ್ಪ ಅವರು ಮೂರು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿದರು.
ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಪ್ರಾಂಶುಪಾಲ ಡಾ. ಎಂ. ಬಸವರಾಜ್ ಅವರು ಉಪಸ್ಥಿತರಿದ್ದರು. ಎಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥರಾದ ಡಾ. ದಿವಾಕರ ಎಸ್.ಎಸ್. ಹಾಗೂ ವಿಭಾಗದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಸಮಾರೋಪ ಸಮಾರಂಭದಲ್ಲಿ ಕೊಡವ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ಸಿ.ಪಿ. ರಾಕೇಶ್ ಪೂವಯ್ಯ ಅವರು ಉಪಸ್ಥಿತರಿದ್ದರು. ಪ್ರಶಂಸನಾ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದರು.