ಸೋಮವಾರಪೇಟೆ, ಫೆ. ೨೧: ಆಕಸ್ಮಿಕವಾಗಿ ಕುಸಿದು ಬಿದ್ದು ಮಹಿಳೆಯೋರ್ವರು ಮೃತ ಪಟ್ಟಿರುವ ಘಟನೆ ಸಮೀಪದ ಐಗೂರು ಗ್ರಾಮದಲ್ಲಿ ನಡೆದಿದೆ.

ಐಗೂರು ಗ್ರಾಮದ ಪಾಷಾಣಮೂರ್ತಿ ದೇವಸ್ಥಾನ ರಸ್ತೆ ನಿವಾಸಿ ಸುರೇಶ್ ಎಂಬವರ ಪತ್ನಿ ಹೇಮಾವತಿ(೪೫)ಮೃತಪಟ್ಟವರು. ನಿನ್ನೆ ಸಂಜೆ ಮನೆಯಲ್ಲಿ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ತಕ್ಷಣವೇ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆತರುವ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ ಎಂದು ಇನ್ಸ್ಪೆಕ್ಟರ್ ರಾಮಚಂದ್ರ ನಾಯಕ್ ಮಾಹಿತಿ ನೀಡಿದ್ದಾರೆ.