ರೂಪಾ ವಿರುದ್ಧ ರೋಹಿಣಿ ಸಿಂಧೂರಿ ದೂರು
ಬೆಂಗಳೂರು, ಫೆ. ೨೦: ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಜಗಳ ತಾರಕಕ್ಕೇರಿದ್ದು, ಇಂದು ರೋಹಿಣಿ ಸಿಂಧೂರಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ವಿಧಾನಸೌಧಕ್ಕೆ ಆಗಮಿಸಿದ ರೋಹಿಣಿ ಸಿಂಧೂರಿ ಅವರು ಇಂದು ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರನ್ನು ಭೇಟಿ ಮಾಡಿ ದೂರು ಸಲ್ಲಿಕೆ ಮಾಡಿದ್ದಾರೆ. ಮನೆಯಿಂದ ನೇರವಾಗಿ ವಿಧಾನ ಸೌಧಕ್ಕೆ ತೆರಳಿದ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಅವರನ್ನು ಭೇಟಿಯಾಗಿ ರೂಪಾ ವಿರುದ್ಧ ದೂರು ಸಲ್ಲಿಸಿದರು. ಡಿ.ರೂಪಾ ತಮ್ಮ ವಿರುದ್ಧ ಆಧಾರ ರಹಿತ ಆರೋಪಗಳನ್ನ ಮಾಡುತ್ತಿದ್ದಾರೆ. ಇದಕ್ಕೆ ಸಂಬAಧಿಸಿದ ಸೋಷಿಯಲ್ ಮೀಡಿಯಾ ಲಿಂಕ್ ನೀಡಲಾಗಿದೆ. ಆಲ್ ಇಂಡಿಯಾ ಸರ್ವಿಸ್ ಕಂಡೆಕ್ಟ್ ರೋಲ್ಡ್ ಉಲ್ಲಂಘನೆ ಮಾಡಲಾಗಿದೆ. ನನ್ನ ಮೇಲೆ ಇಪ್ಪತ್ತು ಸುಳ್ಳು ಆರೋಪಗಳನ್ನು ಡಿ.ರೂಪಾ ಮಾಡಿದ್ದಾರೆ. ಡಿ.ರೂಪಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸಿಎಸ್‌ಗೆ ರೋಹಿಣಿ ಆಗ್ರಹ ಮಾಡಿದ್ದಾರೆ. ಅಂತೆಯೇ ನಾನು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿಲ್ಲ. ವೈಯಕ್ತಿಕ ಆರೋಪದ ಬಗ್ಗೆ ನನ್ನ ಗಂಡ ಮಾತನಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಆರೋಪ ಮಾಡಬಾರದು ಎಂದು ಸಿಎಸ್‌ಗೆ ಸಿಂಧೂರಿ ದೂರು ನೀಡಿದ್ದಾರೆ.
ಖ್ಯಾತ ನಿರ್ದೇಶಕ ಭಗವಾನ್ ವಿಧಿವಶ
ಬೆಂಗಳೂರು, ಫೆ. ೨೦: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಭಗವಾನ್ (೯೦) ನಿಧನ ಹೊಂದಿದ್ದಾರೆ. ವಯೋಸಹಜ ಖಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಡಾ. ರಾಜ್ ಕುಮಾರ್ ಅವರ ಬಹುತೇಕ ಸಿನಿಮಾಗಳಿಗೆ ನಿರ್ದೇಶನ ಮಾಡಿ ಹಲವು ಹಿಟ್ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದರು. ಮತ್ತೊಬ್ಬ ಖ್ಯಾತ ನಿರ್ದೇಶಕ ದೊರೈರಾಜ್ ಮತ್ತು ಭಗವಾನ್ ಜೋಡಿ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಗಳಿಸಿದ್ದರು. ಇವರಿಬ್ಬರು ಒಟ್ಟಿಗೆ ಇಪ್ಪತ್ತೇಳು ಚಿತ್ರಗಳನ್ನು ನಿರ್ದೇಶಿಸಿದ್ದಾರೆ, ಅದರಲ್ಲಿ ಹೆಚ್ಚಿನವು ರಾಜಕುಮಾರ್ ನಟಿಸಿದ್ದಾರೆ ಮತ್ತು ಗಲ್ಲಾಪೆಟ್ಟಿಗೆಯಲ್ಲಿ ಹೆಚ್ಚು ಯಶಸ್ವಿಯಾದವು. ಅವುಗಳಲ್ಲಿ ಹದಿನಾಲ್ಕು ಕನ್ನಡ ಕಾದಂಬರಿಗಳನ್ನು ಆಧರಿಸಿದ್ದವು. ೭೦-೮೦ರ ದಶಕದಲ್ಲಿ ಕನ್ನಡ ಚಿತ್ರರಂಗ ಪ್ರಜ್ವಲಿಸಿದ್ದು, ಖ್ಯಾತ ದೊರೈ-ಭಗವಾನ್ ನಿರ್ದೇಶನ ಒಂದು ದೊಡ್ಡ ಕಾರಣ. ಭಗವಾನ್ ನಿಧನಕ್ಕೆ ನಾಡಿನ ರಾಜಕೀಯ ನಾಯಕರು, ಗಣ್ಯರು, ಸಿನಿಪ್ರಿಯರು, ಕನ್ನಡ ಚಿತ್ರರಂಗದ ಕಲಾವಿದರು ಸಂತಾಪ ಸೂಚಿಸುತ್ತಿದ್ದಾರೆ. ಬೆಂಗಳೂರಿನ ಸಹಕಾರ ನಗರದಲ್ಲಿರುವ ಅವರ ನಿವಾಸದಿಂದ ಪಾರ್ಥಿವ ಶರೀರವನ್ನು ಮಧ್ಯಾಹ್ನ ೧೨ ಗಂಟೆಗೆ ರವೀಂದ್ರಕಲಾಕ್ಷೇತ್ರಕ್ಕೆ ಕೊಂಡೊಯ್ದು ಸಂಜೆ ೪ ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಸಂಜೆ ಚಾಮರಾಜಪೇಟೆ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿತು.
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ
ಬೆಂಗಳೂರು, ಫೆ. ೨೦: ಬಿಲ್ಲವ/ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿರುವ ಈಡಿಗ- ಬಿಲ್ಲವ ಸಮುದಾಯದ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ ಅವರು, ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ ೨೬ ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ ಎಂದು ಹೇಳಿದ್ದಾರೆ. ಸಂವಿಧಾನದ ಅನುಚ್ಛೇದ-೧೫(೪)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು ೧೬(೪)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪವರ್ಗ ೨'ಎ'ಯ ಕ್ರಮಸಂಖ್ಯೆ ೪(ಚಿ)ಯಿಂದ (z)ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು ೨೬ ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗುವುದು ಎಂದು ಇಲಾಖೆಯ ಅಧೀನನ ಕಾರ್ಯದರ್ಶಿ ಷಾಹಿನ್ ಪರ್ವಿನ್ ಆದೇಶದಲ್ಲಿ ತಿಳಿಸಿದ್ದಾರೆ.
ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಸುಪ್ರೀಂ ಮೊರೆ
ನವದೆಹಲಿ, ಫೆ. ೨೦: ಮಹಾರಾಷ್ಟçದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಏಕನಾಥ್ ಶಿಂಧೆ ಅವರಿಗೆ ಶಿವಸೇನೆಯ ಹೆಸರು ಮತ್ತು ಚಿಹ್ನೆಯನ್ನು ನೀಡುವ ಚುನಾವಣಾ ಆಯೋಗದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಹಿರಿಯ ವಕೀಲ ಎಎಂ ಸಿಂಘ್ವಿ ಅವರು ಸೋಮವಾರ ಸಿಜೆಐ ಡಿವೈ ಚಂದ್ರಚೂಡ್ ಅವರ ಪೀಠದ ಮುಂದೆ ಪಟ್ಟಿಯಲ್ಲಿಲ್ಲದ ಪ್ರಸ್ತಾಪವನ್ನು ಮಾಡಲು ಪ್ರಯತ್ನಿಸಿದರು. ತುರ್ತು ವಿಚಾರಣೆಗೆ ನಿರಾಕರಿಸಿದ ಸಿಜೆಐ ಡಿವೈ ಚಂದ್ರಚೂಡ್ ಅವರು ಮಂಗಳವಾರ ಅದೇ ವಿಷಯವನ್ನು ಪ್ರಸ್ತಾಪಿಸುವಂತೆ ಹೇಳಿದರು. ಕ್ಷಮಿಸಿ ಮಿಸ್ಟರ್ ಸಿಂಘ್ವಿ, ನೀವು ಉಲ್ಲೇಖಿಸುವ ವಿಚಾರ ಪಟ್ಟಿಯ ಅಡಿಯಲ್ಲಿ ವಿಚಾರಣೆಗೆ ಬರಬೇಕು. ನಾಳೆ ಬನ್ನಿ. ನಿಯಮ ಎಲ್ಲರಿಗೂ ಅನ್ವಯಿಸುತ್ತದೆ' ಎಂದು ಸಿಜೆಐ ಹೇಳಿದರು. ಚುನಾವಣಾ ಆಯೋಗ ಶುಕ್ರವಾರ ಏಕನಾಥ್ ಶಿಂಧೆ ಅವರ ಬಣಕ್ಕೆ ಪಕ್ಷದ ಹೆಸರು ಮತ್ತು 'ಬಿಲ್ಲು ಮತ್ತು ಬಾಣ'ದ ಚಿಹ್ನೆಯನ್ನು ಬಳಸಲು ಅನುಮತಿ ನೀಡಿದೆ. ಶಾಸಕಾಂಗ ವಿಭಾಗದಲ್ಲಿ ಪಕ್ಷದ ಸಂಖ್ಯಾ ಬಲವನ್ನು ಅವಲಂಬಿಸಿ ಈ ಆದೇಶವನ್ನು ನೀಡಲಾಗಿದೆ. ಅಲ್ಲಿ ೫೫ ಶಾಸಕರ ಪೈಕಿ ೪೦ ಶಾಸಕರು ಮತ್ತು ೧೮ ಲೋಕಸಭಾ ಸದಸ್ಯರಲ್ಲಿ ೧೩ ಸದಸ್ಯರ ಬೆಂಬಲವನ್ನು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೊಂದಿದ್ದಾರೆ.
ಮೋದಿಯನ್ನು ಕೊಂಡಾಡಿದ ಜೆ.ಪಿ. ನಡ್ಡಾ
ಉಡುಪಿ, ಫೆ. ೨೦: ಕೋವಿಡ್‌ನಿಂದಾಗಿ ಈಗಲೂ ಅಮೆರಿಕದಲ್ಲಿ ಜನ ಮಾಸ್ಕ್ ಧರಿಸಿ ಓಡಾಡುತ್ತಿದ್ದು, ಉಕ್ರೇನ್-ರಷ್ಯಾ ಯುದ್ಧಕ್ಕೆ ಬ್ರೇಕ್ ಹಾಕಿ ಭಾರತೀಯರ ರಕ್ಷಿಸಿದ್ದು ಪ್ರಧಾನಿ ಮೋದಿ ಎಂದು ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ. ಕರ್ನಾಟಕದಲ್ಲಿ ಏಪ್ರಿಲ್-ಮೇ ಆಸುಪಾಸಿನಲ್ಲಿ ಚುನಾವಣೆ ನಡೆಯಲಿದ್ದು, ಇದೇ ಕಾರಣಕ್ಕಾಗಿ ಕರ್ನಾಟಕ ಪ್ರವಾಸದಲ್ಲಿರುವ ಜೆಪಿನಡ್ಡಾ ಇಂದು ಉಡುಪಿಯಲ್ಲಿ ಮಾತನಾಡಿ ಕೇಂದ್ರ ಸರ್ಕಾರದ ಕಾರ್ಯಗಳನ್ನು ಶ್ಲಾಘಿಸಿದರು. ನೀವೆಲ್ಲರೂ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ದೂರದರ್ಶನದಲ್ಲಿ ನೋಡಿರುತ್ತೀರಿ. ಅವರು ಈಗಲೂ ಕೋವಿಡ್ ಭೀತಿಯಿಂದ ಮಾಸ್ಕ್ ಧರಿಸುತ್ತಾರೆ. ಏಕೆಂದರೆ ಅಮೆರಿಕದಲ್ಲಿ ಈಗಲೂ ಕೋವಿಡ್ ಸಾಂಕ್ರಾಮಿಕ ಭೀತಿ ಇದ್ದು, ಅಲ್ಲಿ ಕೇವಲ ೭೬%ರಷ್ಟು ಮಾತ್ರ ಲಸಿಕೀಕರಣ ನಡೆದಿದೆ. ಆದರೆ ನಮ್ಮ ದೇಶದಲ್ಲಿ ಪರಿಸ್ಥಿತಿ ತದ್ವಿರುದ್ಧವಾಗಿದ್ದು, ಇಲ್ಲಿ ಯಾರೂ ಮಾಸ್ಕ್ ಧರಿಸಿಲ್ಲ ಮತ್ತು ಎಲ್ಲರೂ ಪರಸ್ಪರ ಹತ್ತಿರ ಕುಳಿತಿರುವುದನ್ನು ನಾನು ನೋಡುತ್ತೇನೆ. ಏಕೆಂದರೆ ಪ್ರಧಾನಿ ಮೋದಿ ನಮಗೆ ೨೨೦ ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ನೀಡಿದ್ದಾರೆ ಎಂದು ಹೇಳಿದರು.
೯೧.೩೫ ಲಕ್ಷ ಮೌಲ್ಯದ ಚಿನ್ನ ವಶ
ಮಂಗಳೂರು, ಫೆ. ೨೦: ಮಂಗಳೂರು ಅಂತರರಾಷ್ಟಿçÃಯ ವಿಮಾನ ನಿಲ್ದಾಣದ (ಎಂಐಎ) ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕರಿಂದ ೯೧.೩೫ ಲಕ್ಷ ರೂಪಾಯಿ ಮೌಲ್ಯದ ೧,೬೨೫ ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈ ಮತ್ತು ಬಹ್ರೇನ್‌ನಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಪ್ರಕಟಣೆ ತಿಳಿಸಿದೆ. ಟ್ರಾಲಿ ಬ್ಯಾಗ್‌ನ ಹಿಡಿಕೆಯಲ್ಲಿ, ಗುದನಾಳದಲ್ಲಿ, ಬಾಯಿಯಲ್ಲಿ ಮತ್ತು ತೆಳುವಾದ ಪದರದ ರೂಪದಲ್ಲಿ ರಟ್ಟಿನ ಪೆಟ್ಟಿಗೆಯಲ್ಲಿ ಅಂಟಿಸಿದAತೆ ಸೇರಿ ವಿವಿಧ ವಿಧಾನಗಳ ಮೂಲಕ ಚಿನ್ನವನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು.