*ಸಿದ್ದಾಪುರ, ಫೆ. ೨೧: ಜಿಲ್ಲೆಯ ವಿವಿಧೆಡೆ ಸ್ಥಳೀಯ ಸಂಸ್ಥೆಗಳಿAದ ಅನುಮತಿ ಪಡೆಯದೆ ಬ್ಯಾನರ್ ಮತ್ತು ಕಟೌಟ್ಗಳನ್ನು ಅಳವಡಿಸುತ್ತಿರುವುದು ಕಂಡು ಬಂದಿದೆ.
ಸಿದ್ದಾಪುರ, ನೆಲ್ಲಿಹುದಿಕೇರಿ, ಅಭ್ಯತ್ಮಂಗಲ, ವಾಲ್ನೂರು, ತ್ಯಾಗತ್ತೂರು, ಮಾಲ್ದಾರೆ ಮತ್ತಿತರೆಡೆ ಬ್ಯಾನರ್ ಮತ್ತು ಕಟೌಟ್ಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರಿಗೆ ಹಾಗೂ ವಾಹನ ಚಾಲಕರಿಗೆ ಕಿರಿಕಿರಿ ಉಂಟು ಮಾಡುತ್ತಿದೆ.
ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ದಾನಿಗಳ ಸಂಖ್ಯೆಯೂ ಹೆಚ್ಚಾಗುತ್ತಿರುವುದರಿಂದ ವಿವಿಧ ರಾಜಕೀಯ ಪಕ್ಷಗಳು, ಸಂಘ, ಸಂಸ್ಥೆಗಳು, ಸಂಘಟನೆಗಳು ದಾನಿಗಳ ಭಾವಚಿತ್ರದ ಕಟೌಟ್ ಮತ್ತು ಬ್ಯಾನರ್ಗಳನ್ನು ಅಳವಡಿಸುತ್ತಿರುವುದು ಕಂಡು ಬಂದಿದೆ. ಕಾರ್ಯಕ್ರಮ ಮುಗಿದ ನಂತರ ಅವುಗಳನ್ನು ತೆರವುಗೊಳಿಸದೆ ಹಾಗೇ ಬಿಡಲಾಗುತ್ತಿದೆ. ಸ್ಥಳೀಯ ಆಡಳಿತ ವ್ಯವಸ್ಥೆಯಿಂದ ಅನುಮತಿ ಪಡೆಯದೆ ಬ್ಯಾನರ್ ಮತ್ತು ಕಟೌಟ್ ಅಳವಡಿಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಈ ರೀತಿಯ ನಿಯಮ ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕೆನ್ನುವ ಒತ್ತಾಯ ಕೇಳಿ ಬಂದಿದೆ.