ಮಡಿಕೇರಿ, ಫೆ. ೨೨: ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಮಡಿಕೇರಿ ಲಯನ್ಸ್ ಕ್ಲಬ್ ಹಾಗೂ ಮೈಸೂರಿನ ಸುಯೋಗ್ ಆಸ್ಪತ್ರೆ ಸಹಯೋಗದಲ್ಲಿ ಮಡಿಕೇರಿ ಲಯನ್ಸ್ ಸಭಾಂಗಣದಲ್ಲಿ ತಾ. ೨೫ ರಂದು ಪತ್ರಕರ್ತರು, ಪತ್ರಕರ್ತರ ಕುಟುಂಬ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗಿದೆ.

ಶಿಬಿರದಲ್ಲಿ ಹೃದಯ ತಜ್ಞರು, ಸ್ತಿçÃರೋಗ ತಜ್ಞರು, ಗ್ಯಾಸ್ಟೊçà ಎಂಡೋಲಾಜಿಸ್ಟ್, ಫಿಜಿಸಿಯನ್ ವೈದ್ಯರುಗಳು ತಪಾಸಣೆ ನಡೆಸಲಿದ್ದಾರೆ. ಇಕೋ ಪರೀಕ್ಷೆ, ಇ.ಸಿ.ಜಿ, ಮಧುಮೇಹ, ರಕ್ತದೊತ್ತಡ ತಪಾಸಣಾ ವ್ಯವಸ್ಥೆ ಇರಲಿದೆ. ಬೆಳಿಗ್ಗೆ ೯ ಗಂಟೆಯಿAದ ಶಿಬಿರ ಆರಂಭವಾಗಲಿದ್ದು, ಮಧ್ಯಾಹ್ನ ೩ ಗಂಟೆವರೆಗೆ ನಡೆಯಲಿದೆ. ಬೆಳಿಗ್ಗೆ ೧೦.೩೦ ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಹೆಚ್.ಆರ್. ಹರೀಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದು, ಕೆಪಿಸಿಸಿ ಪ್ರಮುಖರು, ಹೈಕೋರ್ಟ್ನ ನಿಕಟಪೂರ್ವ ಅಭಿಯೋಜಕ ಹೆಚ್.ಎಸ್. ಚಂದ್ರಮೌಳಿ ಉದ್ಘಾಟನೆ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಮಂಡೇಪAಡ ಪಿ. ಸುನಿಲ್ ಸುಬ್ರಮಣಿ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಎ. ಮುರಳೀಧರ್, ಲಯನ್ಸ್ ಕ್ಲಬ್ ಅಧ್ಯಕ್ಷೆ ಕನ್ನಂಡ ಕವಿತ, ಕೊಡಗು ಪತ್ರಕರ್ತರ ಸಂಘದ ಉಪಾಧ್ಯಕ್ಷ ಜಿ.ವಿ. ರವಿಕುಮಾರ್ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಪತ್ರಕರ್ತರ ಸಂಘದ ಪ್ರಕಟಣೆ ತಿಳಿಸಿದೆ.