ಮಡಿಕೇರಿ, ಫೆ. ೨೧: ಜಾತ್ಯತೀತ ಜನತಾದಳ ಪಕ್ಷದಲ್ಲಿ ಗುರುತಿಸಿಕೊಂಡು ಕೊಡಗು ಜಿಲ್ಲಾಧ್ಯಕ್ಷರಾಗಿ, ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಸ್ಪರ್ಧಿಸಿದ್ದ ಮೇರಿಯಂಡ ಸಂಕೇತ್ ಪೂವಯ್ಯ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಜಾತ್ಯತೀತ ಮತ ವಿಭಜನೆಯಾಗುತ್ತಿರುವ ಪರಿಣಾಮ ಬಿಜೆಪಿ ನಿರಂತರ ಗೆಲುವು ಸಾಧಿಸುತ್ತಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಾಂಗ್ರೆಸ್ಗೆ ಬೆಂಬಲ ನೀಡಬೇಕೆಂಬ ಇಚ್ಛೆ ಹೊಂದಿದ್ದೇನೆ ಎಂದು ಜೆಡಿಎಸ್ ರಾಷ್ಟಾçಧ್ಯಕ್ಷ ಹೆಚ್.ಡಿ. ದೇವೇಗೌಡ ಅವರಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.