ಮಡಿಕೇರಿ, ಫೆ. ೨೧: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ೪೫೦ ಹಾಸಿಗೆ ಸಾಮರ್ಥ್ಯದ ಕಟ್ಟಡ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾಧಿಕಾರಿ ಅವರು ಸಭೆಯಲ್ಲಿ ಹಾಜರಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರ್, ವೈದ್ಯಕೀಯ ಕಾಲೇಜು ಅಧಿಕಾರಿಗಳು ಹಾಗೂ ಕಟ್ಟಡ ಕಾಮಗಾರಿ ನಿರ್ಮಿಸುತ್ತಿರುವ ಕಂಪನಿಯ ಪ್ರತಿನಿಧಿಗಳಿಂದ ಮಾಹಿತಿ ಪಡೆದರು.
ಹಾಲಿ ಬೋಧಕ ಆಸ್ಪತ್ರೆಯ ಮುಖ್ಯ ಕಟ್ಡಡದ ಬಳಿ ೮ ಅಂತಸ್ತಿನ ೩೦೦ ಹಾಸಿಗೆ ಸಾಮರ್ಥ್ಯದ ಕಟ್ಟಡ ಮತ್ತು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಬಳಿ ೭ ಅಂತಸ್ತಿನ ೧೫೦ ಹಾಸಿಗೆ ಸಾಮರ್ಥ್ಯದ ಕಟ್ಟಡ ಕಾಮಗಾರಿ ಪ್ರಗತಿ ಯಲ್ಲಿದ್ದು, ಕಾಮಗಾರಿ ಮುಕ್ತಾಯ ದಿನಾಂಕ ೧೮.೧೧.೨೦೨೩ ಆಗಿದ್ದು, ಇಲ್ಲಿಯವರೆಗೆ ೯೫.೯೧ ಕೋಟಿ ಅನುದಾನ ಬಿಡಗಡೆಯಾಗಿದೆ. ಹೆಚ್ಚುವರಿಯಾಗಿ ೩೯.೦೯ ಕೋಟಿ ಅನುದಾನ ಬಿಡುಗಡೆ ಆಗಬೇಕಿದೆ ಹಾಗೂ ಎರಡನೇ ಹಂತದಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳಿಗೆ ಪ್ರಸ್ತಾವನೆಯನ್ನು ಮುಖ್ಯ ಎಂಜಿನಿಯರ್ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ ಗೌಡ ಮಾಹಿತಿ ನೀಡಿದರು.
ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಮಾತನಾಡಿ, ಮಾರ್ಚ್ ಮಾಹೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಆಗಮಿ ಸುವ ನಿರೀಕ್ಷೆ ಇದ್ದು, ಈ ಸಂದರ್ಭ ದಲ್ಲಿ ೧೫೦ ಹಾಸಿಗೆ ಸಾಮರ್ಥ್ಯದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡವನ್ನು ಮಾರ್ಚ್ ೧೭ ರೊಳಗೆ ಮುಕ್ತಾಯಗೊಳಿಸಲು ಸೂಚಿಸಿದರು.ಈ ಸಂದರ್ಭದಲ್ಲಿ ಈ ಕಟ್ಟಡದ ಕಾಮಗಾರಿ ಶೇ.೯೦ ರಷ್ಟು ಪೂರ್ಣ ಗೊಂಡಿದ್ದು, ಕಟ್ಟಡ ಕಾಮಗಾರಿ ಅಂತಿಮ ಹಂತದಲ್ಲಿದ್ದು ನೀರು, ವಿದ್ಯುತ್ ಒದಗಿಸಲಾಗಿದ್ದು, ಸುಣ್ಣ ಬಣ್ಣದ ಕಾಮಗಾರಿಯನ್ನು ೧ ವಾರದೊಳಗೆ ಪೂರ್ಣಗೊಳಿಸು ವುದಾಗಿ ಸಂಬAಧಪಟ್ಟ ಗುತ್ತಿಗೆದಾರರು ಮಾಹಿತಿ ಒದಗಿಸಿದರು.
ಸಭೆಯಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ಕಳ್ಳಿಚಂಡ ಕಾರ್ಯಪ್ಪ, ಮುಖ್ಯ ಆಡಳಿತಾಧಿಕಾರಿ ಸ್ವಾಮಿ ಎ.ಎಲ್, ಪ್ರಾಂಶುಪಾಲ ಡಾ. ವಿಶಾಲ್ ಕುಮಾರ್, ವೈದ್ಯಕೀಯ ಅಧೀಕ್ಷಕ ಡಾ. ರೂಪೇಶ್ ಗೋಪಾಲ್, ಜಿಲ್ಲಾ ಶಸ್ತçಚಿಕಿತ್ಸಕ ಡಾ. ನಂಜುAಡಯ್ಯ, ಸ್ಥಾನೀಯ ವೈದ್ಯಾಧಿಕಾರಿ ಡಾ. ಸತೀಶ್ ವಿ.ಎಸ್, ಸಹಾಯಕ ಕಾರ್ಯಪಾಲಕ ಅಭಿಯಂತರ ನರಸಿಂಹಮೂರ್ತಿ, ಸಹಾಯಕ ಅಭಿಯಂತರ ರಾಜೇಶ್, ರಾಮಕೃಷಿ ಕಟ್ಟಡ ನಿರ್ಮಾಣ ಗುತ್ತಿಗೆ ದಾರರ ಪ್ರತಿನಿಧಿಗಳಾದ ಹೇಮಂತ್, ಗಿರೀಶ್ ಅವರು ಹಾಜರಿದ್ದರು.