ಕೂಡಿಗೆ, ಫೆ. ೨೩: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದ ಸರ್ವೆ ನಂಬರ್ ೧೪ ರಲ್ಲಿ ೪ ಎಕರೆ ಜಾಗವನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ಒದಗಿಸುವ ಉದ್ದೇಶಕ್ಕಾಗಿ ಜಿಲ್ಲಾಧಿಕಾರಿಗಳ ಆದೇಶದಂತೆ ಕಾಯ್ದಿರಿಸಲಾಗಿದೆ.
ಈ ಸಂಬAಧ ೪ ಎಕರೆ ಜಾಗವನ್ನು ಕಂದಾಯ ಇಲಾಖೆಯ ಸೂಚನೆಯಂತೆ ಭೂಮಾಪನ ಇಲಾಖೆಯ ಸಹಯೋಗದೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಜಾಗವನ್ನು ಗುರುತಿಸಿ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ ರಮೇಶ್ ಮತ್ತು ಅಯಾ ವ್ಯಾಪ್ತಿಯ ಸದಸ್ಯರ ಸಮ್ಮುಖದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ ಅವರಿಗೆ ಕಂದಾಯ ಇಲಾಖೆಯಿಂದ ಆದೇಶ ಪತ್ರವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭ ಕುಶಾಲನಗರ ಕಂದಾಯ ನಿರೀಕ್ಷಕ ಸಂತೋಷ, ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಭೂ ಮಾಪನ ಇಲಾಖೆಯ ಅಧಿಕಾರಿ ವೆಂಕಟೇಶ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯರಾದ ದಿನೇಶ್, ಭಾಗ್ಯ, ಪಾರ್ವತಮ್ಮ, ಖತಿಜ, ಗ್ರಾಮಸ್ಥರಾದ ರಾಮೇಗೌಡ,ಹರ್ಷ, ದಿಲೀಪ್, ಸಿ.ಎಸ್. ಮಂಜುನಾಥ, ಸೇರಿದಂತೆ ಇತರರು ಹಾಜರಿದ್ದರು.