ಮಡಿಕೇರಿ, ಫೆ. ೨೨: ಇತಿಹಾಸ ಪ್ರಸಿದ್ಧ ಮಡಿಕೇರಿ ತಾಲೂಕಿನ ಎಮ್ಮೆಮಾಡು ಮಖಾಂ ಉರೂಸ್ ತಾ. ೨೪ ರಿಂದ ಮಾ.೩ ರವರೆಗೆ ನಡೆಯಲಿದೆ ಎಂದು ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಪಿ.ಎ. ಅಬೂಬಕ್ಕರ್ ಸಖಾಫಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಹಝ್ರತ್ ಸೂಫಿ ಶಹೀದ್(ರ) ಮತ್ತು ಸಯ್ಯದ್ ಹಸನ್ ಸಖಾಫ್ ಹಳ್ರಮಿ(ರ) ಮತ್ತು ಇತರ ಮಹಾನುಭಾವರ ಹೆಸರಿನಲ್ಲಿ ಎಮ್ಮೆಮಾಡಿನಲ್ಲಿ ವರ್ಷಂಪ್ರತಿ ನಡೆಯುವ ವಾರ್ಷಿಕ ಉರೂಸ್ ಜಾತಿ ಮತ ಧರ್ಮಗಳನ್ನು ಮೀರಿ ಜಿಲ್ಲೆ, ರಾಜ್ಯ, ಹೊರ ರಾಜ್ಯದ ಜನರನ್ನು ತನ್ನೆಡೆಗೆ ಆಕರ್ಷಿಸುತ್ತಿದೆ. ಈ ಬಾರಿಯ ಉರೂಸ್ನಲ್ಲಿ ನಾಡಿನ ವಿವಿಧೆಡೆಗಳಿಂದ ೫೫ ಸಾವಿರಕ್ಕೂ ಹೆಚ್ಚಿನ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ ಹೇಳಿದರು.
ತಾ.೨೪ ರಂದು ಎಮ್ಮೆಮಾಡು ಜಮಾಅತ್ ಅಧ್ಯಕ್ಷನಾದ ತಾನು ಧ್ವಜಾರೋಹಣವನ್ನು ನೆರವೇರಿಸಲಿದ್ದು, ಉರೂಸ್ನ್ನು ಕೋಝಿಕೋಡ್ ಖಾಝಿಗಳಾದ ಸಯ್ಯಿದ್ ಮುಹಮ್ಮದ್ ಕೋಯ ಜಮಲುಲ್ಲೆöÊಲಿ ತಂಙಳ್ ಅವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೊಡಗಿನ ನಾಯಿಬ್ ಖಾಝಿ ಶಾದುಲಿ ಫೈಝಿ ವಹಿಸಲಿದ್ದಾರೆ. ಎಮ್ಮೆಮಾಡು ಖತೀಬ್ ಅಸ್ನವಿ ಮುಹಿಸಿನ್ ಹುದವಿ ಮುಖ್ಯ ಭಾಷಣ ಮಾಡಲಿದ್ದಾರೆ. ಸಂಜೆ ೮ ಗಂಟೆಗೆ ಶಾಫಿ ಸಖಾಫಿ ಮುಂಡAಬ್ರ ಅವರಿಂದ ಧಾರ್ಮಿಕ ಪ್ರವಚನ ನಡೆಯಲಿದೆ.
ತಾ. ೨೫ ರಂದು ಸಯ್ಯದ್ ಅಬ್ದುಲ್ ರಹ್ನಾನ್ ಇಂಜಿಚ್ಚಿಕೋಯ ಅಲ್ ಬುಖಾರಿ ನೇತೃತ್ವದಲ್ಲಿ ದ್ಸಿಕ್ರ್ ಹಲ್ಖಾ ಮತ್ತು ಮತ ಪ್ರವಚನ ನಡೆಯಲಿದೆ. ಇಬ್ರಾಹಿಂ ಕಲೀಲ್ ಹುದವಿ ಉಪನ್ಯಾಸ ನೀಡಲಿದ್ದಾರೆ. ತಾ. ೨೬ ರಂದು ಸಯ್ಯಿದ್ ಶಿಹಾಬುದ್ದೀನ್ ಅಲ್ ಬುಖಾರಿ ಕಡಲುಂಡಿ ನೇತೃತ್ವದಲ್ಲಿ ಖತಂ ದುಆ ಮಜ್ಲಿಸ್ ನಡೆಯಲಿದೆ. ನೌಫಲ್ ಸಖಾಫಿ ಕಳಸ ಮುಖ್ಯ ಭಾಷಣ ಮಾಡಲಿದ್ದಾರೆ.
ಉರೂಸ್ನ ನಾಲ್ಕನೇ ದಿನವಾದ ತಾ. ೨೭ ರಂದು ಎಮ್ಮೆಮಾಡು ಜಮಾಅತ್ ಅಧ್ಯಕ್ಷರಾದ ಪಿ.ಎ. ಅಬೂಬಕ್ಕರ್ ಸಖಾಫಿ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ ೧೨ ಗಂಟೆಗೆ ಸೌಹಾರ್ದ ಸಮ್ಮೇಳನ ನಡೆಯಲಿದೆ. ಕಾಸರಗೋಡಿನ ಜಾಮಿಯ ಸಅದಿಯ್ಯ ಅಧ್ಯಕ್ಷರಾದ ಸಯ್ಯಿದ್ ಆಟಕೋಯ ತಂಙಳ್ ಕುಂಬೋಲ್ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಮೌಲಾನಾ ಪೆರೋಡ್ ಅಬ್ದುಲ್ ರಹ್ಮಾನ್ ಸಖಾಫಿ, ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನಾ ಶಾಫಿ ಸಅದಿ ಪಾಲ್ಗೊಳ್ಳ ಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ಕೆ.ಜಿ. ಬೋಪಯ್ಯ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷರಾದ ಎ.ಎಸ್. ಪೊನ್ನಣ್ಣ , ರಾಜ್ಯ ವಕ್ಫ್ ಮಂಡಳಿ ಉಪಾಧ್ಯಕ್ಷರಾದ ಯಾಕೂಬ್ ಮೊದಲಾದ ಗಣ್ಯರು ಪಾಲ್ಗೊಳ್ಳಲಿದಾರೆ. ಸಂಜೆ ೪ ರಿಂದ ೬ರ ವರೆಗೆ ಅನ್ನದಾನ ನಡೆಯಲಿದೆ. ರಾತ್ರಿ ಬಶೀರ್ ಫೈಝಿ ದೇಶಮಂಗಲA ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ತಾ. ೨೮ರ ರಾತ್ರಿ ಆಶಿಕ್ ದಾರಿಮಿ ಆಲಪ್ಪುಝರಿಂದ ಮತಪ್ರವಚನ ನಡೆಯಲಿದೆ ಎಂದು ಅವರು ಮಾಹಿತಿಯಿತ್ತರು.
ಮಾ.೧ರಂದು ಡಾ. ಹಾಫಿಲ್ ಜುನೈದ್ ಜೌಹರಿ ಕೊಲ್ಲಂರಿAದ ಹಾಗೂ ಮಾ.೨ರಂದು ರಾತ್ರಿ ೮ ಗಂಟೆಗೆ ಅಬ್ದುಸಲಾಂ ಶಾಮಿಲ್ ಇರ್ಫಾನಿ ಕಾಮಿಲ್ ಸಖಾಫಿ ಚೆಯ್ಯೂರ್ ಸ್ವಲಾತುನ್ನಾರಿಯ ಮಜ್ಲಿಸ್ನ ನೇತೃತ್ವ ವಹಿಸಲಿದ್ದಾರೆ. ಅಬ್ದುಸಲಾಂ ಮುಸ್ಲಿಯಾರ್ ದೇವರ್ಶೋಲ ಪ್ರವಚನ ನೀಡಲಿದ್ದಾರೆ. ಮಾ.೩ ರ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ನಾಯಿಬ್ ಖಾಝಿ ಕೊಡಗು ಅಬ್ದುಲ್ಲಾ ಫೈಜಿ ಎಡಪಾಲ ವಹಿಸಲಿದ್ದಾರೆ. ಬದ್ರು ಸಾದಾತ್ ಸಯ್ಯಿದ್ ಇಬ್ರಾಹಿಂ ಖಲೀಲುಲ್ ಬುಖಾರಿ ಕಡಲುಂಡಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಡಾಕ್ಟರ್ ಅಬ್ದುಲ್ ಹಕೀಂ ಅಝರಿ ಕಾಂತಪುರA ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ಅವರು ಹೇಳಿದರು.
ಗೋಷ್ಠಿಯಲ್ಲಿ ಎಮ್ಮೆಮಾಡು ತಾಜಲ್ ಇಸ್ಲಾಂ ಮುಸ್ಲಿಂ ಜಮಾಅತ್ ಕೋಶಾಧಿಕಾರಿ ಅಲಿ ನೆರೂಟ್, ಸಮಿತಿ ಸದಸ್ಯರಾದ ಉಸ್ಮಾನ್ ಮಾಂದಾಲ್ ಉಪಸ್ಥಿತರಿದ್ದರು.