ನಾಪೋಕ್ಲು, ಫೆ. ೨೩: ಇಲ್ಲಿಗೆ ಸಮೀಪದ ಹಳೆ ತಾಲೂಕಿನ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ವಾರ್ಷಿಕ ಮಹಾಸಭೆ ತಾ. ೨೫ ರಂದು ಪೂರ್ವಾಹ್ನ ೯ ಗಂಟೆಗೆ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರನ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಮಧ್ಯಾಹ್ನ ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಸಂಜೆ ೬ ಗಂಟೆಗೆ ಮುತ್ತಪ್ಪ ದೇವರ ವಿಶೇಷ ವೆಳ್ಳಾಟಂ ನಡೆಯಲಿದೆ ಎಂದು ಆಡಳಿತ ಮಂಡಳಿಯ ಪ್ರಕಟಣೆ ತಿಳಿಸಿದೆ.