ಮಡಿಕೇರಿ, ಫೆ. ೨೩: ಆಟೋ ಹಾಗೂ ಬೊಲೆರೋ ವಾಹನ ನಡುವೆ ಮಡಿಕೇರಿ-ವೀರಾಜಪೇಟೆ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಯಾಣಿಕರು, ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಡಿಕೇರಿಯಿಂದ ವೀರಾಜಪೇಟೆ ಕಡೆಗೆ ಹೋಗುತ್ತಿದ್ದ ಇಲಾಖೆಯೊಂದಕ್ಕೆ ಸೇರಿದ ಬೊಲೆರೋ ಹಾಗೂ ವೀರಾಜಪೇಟೆ ಕಡೆಯಿಂದ ಮಡಿಕೇರಿಗೆ ಬರುತ್ತಿದ್ದ ಆಟೋ ನಡುವೆ ಡಿಕ್ಕಿಯಾಗಿದೆ. ಆಟೋದಲ್ಲಿ ಮೂವರು ಪ್ರಯಾಣಿಕರಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಆಟೋ ಮುಂಭಾಗ ನಜ್ಜುಗುಜ್ಜಾಗಿದೆ. ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.