ಸೋಮವಾರಪೇಟೆ, ಫೆ. ೨೩: ಮೈಸೂರು ಪ್ರಾಚ್ಯವಸ್ತು ಮತ್ತು ಪರಂಪರೆ ಇಲಾಖೆಯ ವತಿಯಿಂದ ಮಡಿಕೇರಿ ಬಿ.ಆರ್.ಸಿ. ಕೇಂದ್ರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿಭಾಗದ ‘ಪ್ರಾಚ್ಯ ವಸ್ತು ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ’ ಭಾಷಣ ಸ್ಪರ್ಧೆಯಲ್ಲಿ ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ೯ನೇ ತರಗತಿ ವಿದ್ಯಾರ್ಥಿನಿ ಎಸ್.ಕೆ. ಮುಫೀದಾ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.