ಸೋಮವಾರಪೇಟೆ, ಫೆ. ೨೩: ಸಮೀಪದ ತಣ್ಣೀರುಹಳ್ಳ ಗ್ರಾಮದ ಶ್ರೀ ಬಸವೇಶ್ವರ ದೇವಾಲಯ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮದ ಬಸವೇಶ್ವರ ಯುವಕ ಸಂಘದ ವತಿಯಿಂದ ರೂ. ೩೦ ಸಾವಿರ ರೂಪಾಯಿಗಳನ್ನು ದೇಣಿಗೆಯಾಗಿ ನೀಡಲಾಯಿತು.
ದೇವಾಲಯದಲ್ಲಿ ನಡೆದ ಜಾತ್ರೋತ್ಸವ ಸಂದರ್ಭ ಯುವಕ ಸಂಘದ ಅಧ್ಯಕ್ಷ ಸದಾನಂದ ಅವರು ದೇಣಿಗೆ ಹಸ್ತಾಂತರಿಸಿದರು. ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಎ.ಎಲ್. ಮಂಜುನಾಥ್, ಭುವನೇಂದ್ರ ಸೇರಿದಂತೆ ಪದಾಧಿಕಾರಿಗಳು ಇದ್ದರು.