ವೀರಾಜಪೇಟೆ, ಫೆ. ೨೨: ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ವೀರಾಜಪೇಟೆ ಸಮೀಪ ಕಲ್ಲುಬಾಣೆಯಲ್ಲಿ ನಡೆದಿದೆ.
ಕಲ್ಲುಬಾಣೆ ಗ್ರಾಮದ ನಿವಾಸಿ ಬಡಕಡ ಅರುಣ್ ಅವರ ಪುತ್ರ ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಥಮ ವರ್ಷದ ಬಿ.ಸಿ.ಎ ವಿದ್ಯಾರ್ಥಿ ಆದಿತ್ಯ (ಭಜನ್-೧೮) ನೇಣಿಗೆ ಶರಣಾದ ವಿದ್ಯಾರ್ಥಿ.
ಆದಿತ್ಯ ಬಿ.ಸಿ.ಎ. ವಿದ್ಯಾರ್ಥಿಯಾಗಿದ್ದು, ಕಾಲೇಜಿಗೆ ಗೈರಾಗುತ್ತಿರುವ ಬಗ್ಗೆ ಮಗನಿಗೆ ಬುದ್ಧಿವಾದ ಹೇಳಿದ್ದು, ಇದರಿಂದ ನೊಂದ ಆದಿತ್ಯ ಇಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತನ ತಂದೆ ಅರುಣ್ ಅವರು ನೀಡಿದ ದೂರಿನ ಮೇರೆಗೆ ವೀರಾಜಪೇಟೆ ನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.