ಮಡಿಕೇರಿ, ಫೆ. ೨೩: ಆಯುಷ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿಯಲ್ಲಿ “ಆಯುಷ್ ಸೇವಾ ಗ್ರಾಮ”ದ ಕಾರ್ಯಕ್ರಮಗಳಲ್ಲಿ ಒಂದಾದ ಯೋಗ ಕಾರ್ಯಕ್ರಮವನ್ನು ಕುಶಾಲನಗರ ತಾಲೂಕಿನ ಕೊಡಗರಳ್ಳಿ ಗ್ರಾಮದ ನೇತಾಜಿ ಸಮುದಾಯ ಭವನದಲ್ಲಿ ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ನೀತಾ ಹರೀಶ್, ಚನ್ನಬಸವಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾದೇವಿ, ಮಡಿಕೇರಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯರಾದ ಡಾ. ಸರಸ್ವತಿ, ಆಶಾ ಕಾರ್ಯಕರ್ತೆಯರು, ಅಂಗವಾಡಿ ಶಿಕ್ಷಕರು, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಪಾಲ್ಗೊಂಡಿದ್ದರು.
ಕಾರ್ಯಕ್ರಮದಲ್ಲಿ ಭಾರತೀಯ ವಿದ್ಯಾಭವನದ ಯೋಗ ಶಿಕ್ಷಕ ಮಹೇಶ್ಕುಮಾರ್ ಅವರು ಯೋಗದ ಮಾಹಿತಿ ನೀಡಿದರು ಮತ್ತು ಕೆಲವು ಯೋಗಭ್ಯಾಸಗಳನ್ನು ಮಕ್ಕಳಿಗೆ ತಿಳಿಸಿಕೊಟ್ಟರು ಮತ್ತು ಪ್ರತಿ ದಿನ ಯೋಗಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ತಿಳಿಸಿದರು.ಬೋಯಿಕೇರಿ-ಇಬ್ಬನಿವಳವಾಡಿ: ಆಯುಷ್ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿಯಲ್ಲಿ ಮಡಿಕೇರಿ ತಾಲೂಕಿನ ಬೋಯಿಕೇರಿ-ಇಬ್ಬನಿವಳವಾಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ “ಆಯುಷ್ ಸೇವಾ ಗ್ರಾಮ” ಕಾರ್ಯಕ್ರಮಗಳಲ್ಲಿ ಒಂದಾದ ಯೋಗ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾರತೀಯ ವಿದ್ಯಾಭವನದ ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಅವರು ಮಕ್ಕಳಿಗೆ ಯೋಗದ ಕುರಿತು ಮಾಹಿತಿ ನೀಡಿದರು ಮತ್ತು ಕೆಲವು ಯೋಗಭ್ಯಾಸಗಳನ್ನು ಮಕ್ಕಳಿಗೆ ತಿಳಿಸಿಕೊಟ್ಟರು. ಪ್ರತಿ ದಿನ ಯೋಗಭ್ಯಾಸ ಮಾಡಲು ವಿದ್ಯಾರ್ಥಿಗಳಿಗೆ ತಿಳಿಸಿದರು. ಗ್ರಾ.ಪಂ. ಅಧ್ಯಕ್ಷ ಜಯಣ್ಣ, ಜಿಲ್ಲಾ ಆಯುಷ್ ಅಧಿಕಾರಿ ಡಾ. ರೇಣುಕಾದೇವಿ, ಶಾಲೆಯ ಮುಖ್ಯೋಪಾಧ್ಯಾಯ ರಾಜು, ಶಾಲೆಯ ಶಿಕ್ಷಕರು, ಮಡಿಕೇರಿ ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯ ವೈದ್ಯೆ ಡಾ. ಸರಸ್ವತಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಿಹೆಚ್ಓ, ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.