ಕೂಡಿಗೆ, ಫೆ. ೨೩: ನಂಜರಾಯ ಪಟ್ಟಣ ಗ್ರಾಮ ಪಂಚಾಯಿತಿಯ ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ವಿಶೇಷ ಗ್ರಾಮಸಭೆಯು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಲ್ಪ, ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಸವಲತ್ತುಗಳ ಹಂಚಿಕೆ, ಸಮುದಾಯದತ್ತ ಕಾಮಗಾರಿ ಗಳನ್ನು ಕೈಗೊಳ್ಳುವ ಸಂಬAಧ ಗ್ರಾಮಸ್ಥರು ತಮ್ಮ ಅಹವಾಲು, ಬೇಡಿಕೆಗಳನ್ನು ಸಲ್ಲಿಸಲು ಈ ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಉದ್ಯೋಗ ಖಾತ್ರಿ ಯೋಜನೆಯ ಅಭಿಯಂತರ ಕಾರ್ತಿಕ್, ಯೋಜನೆಯಡಿ ಕೈಗೊಳ್ಳಬಹುದಾದ ಕಾಮಗಾರಿಗಳು, ಸೌಲಭ್ಯಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಯೋಜನೆಗೆ ಸಂಬAಧಿಸಿದ ಕುಂದುಕೊರತೆಗಳ ಬಗ್ಗೆ ಸಭೆಯ ಗಮನಕ್ಕೆ ತಂದ ಗ್ರಾಮಸ್ಥರು ಅಗತ್ಯ ಸಲಹೆಗಳನ್ನು ಪಡೆದುಕೊಂಡರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ, ಜನಪ್ರತಿನಿಧಿ ಗಳು, ಅಧಿಕಾರಿಗಳು, ಗ್ರಾಮಸ್ಥರು ಪರಸ್ಪರ ಹೊಂದಾಣಿಕೆಯಿAದ ಮುನ್ನಡೆದಲ್ಲಿ ಮಾತ್ರ ಗ್ರಾಮದ ಅಭಿವೃದ್ಧಿ ಸಾಧ್ಯ. ಗ್ರಾಮದ ಅಭಿವೃದ್ಧಿ ಯಲ್ಲಿ ಚುನಾಯಿತ ಜನಪ್ರತಿನಿಧಿಗಳ ಶ್ರಮದ ಜೊತೆ ಗ್ರಾಮಸ್ಥರ ಸಹಕಾರ ಅತಿ ಮುಖ್ಯ. ಕಳೆದ ಸಾಲಿಗೆ ಹೋಲಿಕೆ ಮಾಡಿದಲ್ಲಿ ಈ ಬಾರಿ ಉದ್ಯೋಗ ಖಾತ್ರಿ ಯೋಜನೆ ಯಡಿಯ ಕಾಮಗಾರಿಗಳು ಕುಂಠಿತಗೊAಡಿವೆ. ಸರಕಾರದ ಹೊಸ ಮಾರ್ಗಸೂಚಿ ಕಾರಣದಿಂದ ಈ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳು ಪ್ರಗತಿ ಕಾಣುತ್ತಿಲ್ಲ ಎಂದರು. ಚುನಾವಣಾ ಪೂರ್ವ ತೀರ್ಮಾನದಂತೆ ಗ್ರಾಮ ಪಂಚಾಯಿತಿ ಚುನಾಯಿತ ಜನಪ್ರತಿನಿಧಿಗಳು ಯಾವುದೇ ರೀತಿಯ ಗುತ್ತಿಗೆ ಕಾಮಗಾರಿಗಳಲ್ಲಿ ತೊಡಗಿಸಿ ಕೊಂಡಿಲ್ಲ. ಗ್ರಾಮದ ಅಭಿವೃದ್ಧಿಗೆ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಕಾಮಗಾರಿ ಗಳನ್ನು ಕೈಗೊಂಡ ಸಂದರ್ಭ ಫಲಾನುಭವಿಗಳು ಯಾವುದೇ ರೀತಿಯ ಮೋಸ, ವಂಚನೆಗೆ ಮುಂದಾಗದೆ ಪ್ರಾಮಾಣಿಕತೆ ತೋರಬೇಕಿದೆ ಎಂದು ಮನವಿ ಮಾಡಿದರು. ಆಸಕ್ತಿ, ಆದ್ಯತೆ ಮೇರೆಗೆ ಮಾತ್ರ ಅಗತ್ಯ ಕಾಮಗಾರಿ ಗಳನ್ನು ಸೇರ್ಪಡೆ ಮಾಡಲಾಗುವುದು. ಅಗತ್ಯ ಬೇಡಿಕೆಗಳನ್ನು ಕ್ರಿಯಾ ಯೋಜನೆಗೆ ಸೇರ್ಪಡೆ ಮಾಡಲಾಗುವುದು.
ಉದ್ಯೋಗ ಖಾತ್ರಿ ಯೋಜನೆಯ ಸೌಲಭ್ಯ ಪಡೆದು ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಂಡು ಅಭಿವೃದ್ಧಿ ಚಿಂತನೆ ಹೊಂದುವAತೆ ವಿಶ್ವ ಕರೆ ನೀಡಿದರು. ಹೆದ್ದಾರಿಗಳಲ್ಲಿ ಬೀಡಾಡಿ ದನಗಳ ಹಾವಳಿಯಿಂದ ಪ್ರಾಣಹಾನಿ ಸಂಭವಿಸುತ್ತಿದ್ದು ಜಾನುವಾರುಗಳ ಮಾಲೀಕರು ಈ ಬಗ್ಗೆ ಅಗತ್ಯ ಗಮನ ಹರಿಸುವಂತೆ ಅವರು ಮನವಿ ಮಾಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸಮೀರ, ಸದಸ್ಯರಾದ ಆರ್.ಕೆ. ಚಂದ್ರ, ಲೋಕನಾಥ್, ರಕ್ಷಿತ್ ಕುಸುಮ, ಜಾಜಿ, ಗಿರಿಜಮ್ಮ ಸೇರಿದಂತೆ ಗ್ರಾಮಸ್ಥರು ಇದ್ದರು.