ಗೋಣಿಕೊಪ್ಪಲು, ಫೆ. ೨೨ : ಕರ್ನಾಟಕ ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ರೋಸಿಜಾನ್ ಹೇಳಿದರು.
ವೀರಾಜಪೇಟೆಯ ಸೆರಿನಿಟಿ ಹಾಲ್ನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಜನ ಸ್ಪಂದನ ಸಮಾವೇಶದ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಜನತೆ ಈಗಾಗಲೇ ಬದಲಾವಣೆ ಬಯಸಿದ್ದಾರೆ. ಬಿಜೆಪಿ ಸರ್ಕಾರ ಶೇ. ೪೦ ಕಮಿಷನ್ನಲ್ಲಿ ಕೆಲಸ ಮಾಡುತ್ತಿರುವುದು ಜಗಜಾಹಿರವಾಗಿದೆ. ಮಠಗಳಿಂದ ಶೇ.೩೦ ಕಮಿಷನ್ ಪಡೆಯುವ ಬಗ್ಗೆ ಜನರಿಗೆ ಮನವರಿಕೆ ಆಗಿದೆ. ಹೀಗಾಗಿ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ,
(ಮೊದಲ ಪುಟದಿಂದ) ಉತ್ತಮ ಸರ್ಕಾರ ನೀಡಲು ಕಾಂಗ್ರೆಸ್ನಿAದ ಮಾತ್ರ ಸಾಧ್ಯ. ರಾಜ್ಯದ ಹಲವು ಹಿರಿಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದರು.
ಕಾAಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆÀ ಒಂದು ತಿಂಗಳಲ್ಲಿ ಪ್ರತಿ ಮನೆಯ ಮಹಿಳೆಗೆ ಮಾಸಿಕ ೨ ಸಾವಿರ, ಪ್ರತಿ ಮನೆಗಳಿಗೆ ೨೦೦ ಯೂನಿಟ್ ವಿದ್ಯುತ್ ನೀಡಲಾಗುತ್ತದೆ, ಈ ಬಗ್ಗೆ ಕರ್ನಾಟಕ ಕಾಂಗ್ರೆಸ್ ವಾಗ್ದಾನ ನೀಡುತ್ತಿದೆ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ರಾಜ್ಯ ವರಿಷ್ಠರು ಕೆಲವು ದಿನಗಳಲ್ಲಿ ಕೊಡಗಿನ ಎರಡು ಕ್ಷೇತ್ರಗಳಲ್ಲಿ ಗೆಲುವಿನ ಸಮೀಪವಿರುವ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬೂತ್ ಮಟ್ಟದಿಂದ ಈ ಬಾರಿ ಸಂಘಟಿತವಾಗಿದೆ ಎಂದರು.
ಕೆಪಿಸಿಸಿ ವಕ್ತಾರ ಹೈಕೋರ್ಟ್ ವಕೀಲ ಎ.ಎಸ್. ಪೊನ್ನಣ್ಣ ಮಾತನಾಡಿ, ಧರ್ಮ ಧರ್ಮಗಳ ನಡುವೆ ದ್ವೇಷ ಎತ್ತಿ ಕಟ್ಟುವಂತಹ ರಾಜಕಾರಣ ಕೊನೆಯಾಗಬೇಕು; ಧರ್ಮ ನಿರಪೇಕ್ಷತೆಯನ್ನು ಉಳಿಸಿಕೊಂಡು ಹೋಗಬೇಕು. ಬಿಜೆಪಿಯನ್ನು ಸೋಲಿಸಲು ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು. ಬಿಜೆಪಿ ವಿರುದ್ಧ ಬೇಸರಗೊಂಡ ಜನರು ಬದಲಾವಣೆ ಬಯಸಿದ್ದಾರೆ ಎಂದರು.
ಸಮಾವೇಶಕ್ಕೆ ಮುನ್ನ ಗೋಣಿಕೊಪ್ಪ ಆರ್.ಎಂ.ಸಿ. ಆವರಣದಿಂದ ಯುವ ಕಾಂಗ್ರೆಸ್ ಕಾರ್ಯಕರ್ತರು ವೀರಾಜಪೇಟೆ ತನಕ ಬೈಕ್ ಜಾಥಾ ಹಮ್ಮಿಕೊಂಡಿದ್ದರು. ಬೈಕ್ ಜಾಥಾಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಚಾಲನೆ ನೀಡಿದರು.
ನಗರದ ಸೆರಿನಿಟಿ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಮೇರಿಯಂಡ ಸಂಕೇತ್ ಪೂವಯ್ಯನವರು ಸೇರ್ಪಡೆಗೊಂಡರು.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂಕೇತ್ ಪೂವಯ್ಯ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜಾತ್ಯತೀತ ಮತಗಳು ವಿಭಜನೆ ಆಗಬಾರದು; ಇದರಿಂದ ಕೋಮುವಾದ ಪಕ್ಷದ ಗೆಲುವಿಗೆ ಕಾರಣವಾಗುತ್ತದೆ. ಕಾಂಗ್ರೆಸ್ ಪಕ್ಷದಿಂದ ಎ.ಎಸ್. ಪೊನ್ನಣ್ಣ ಸಮರ್ಥ ಅಭ್ಯರ್ಥಿಯಾಗಿದ್ದಾರೆ. ಇವರಿಂದ ಕೊಡಗಿನ ಸಮಸ್ಯೆಗಳನ್ನು ವಿಧಾನ ಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.
ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ವಿನಯ್ ಕುಮಾರ್ ಸೊರಕೆ, ಮಾಜಿ ಸಚಿವ ಬಿ.ಎ. ಜೀವಿಜಯ, ಕೆ.ಎಂ. ಇಬ್ರಾಹಿಂ, ಹೆಚ್.ಎಸ್. ಚಂದ್ರಮೌಳಿ, ಟಿ.ಪಿ. ರಮೇಶ್ ಸೇರಿದಂತೆ ಇನ್ನಿತರ ಪ್ರಮುಖರು ಮಾತನಾಡಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಚೆಪ್ಪುಡೀರ ಅರುಣ್ ಮಾಚಯ್ಯ, ಕೆಪಿಸಿಸಿಯ ಲಕ್ಷö್ಮಣ್, ಮಂಥರ್ ಗೌಡ, ಮೀದೇರಿರ ನವೀನ್, ರಂಜಿ ಪೂಣಚ್ಚ, ಇಸ್ಮಾಯಿಲ್, ಮಾದಂಡ ತಿಮ್ಮಯ್ಯ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ನೆರವAಡ ಉಮೇಶ್ ಸ್ವಾಗತಿಸಿ, ಎಂ.ಎA. ಶಶಿಧರನ್ ನಿರೂಪಿಸಿ, ನರೇಂದ್ರ ಕಾಮತ್ ವಂದಿಸಿದರು.