ಮಡಿಕೇರಿ, ಫೆ. ೨೩: ವೇತನ, ಭತ್ಯೆ ಪರಿಷ್ಕರಣೆ ಹಾಗೂ ಹಳೇ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿAದ ಮಾರ್ಚ್ ೧ ರಿಂದ ಸರಕಾರಿ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡಿಸಿದ ಆಯವ್ಯಯದಲ್ಲಿ ಸರಕಾರಿ ನೌಕರರ ಬೇಡಿಕೆಯನ್ನು ಪರಿಗಣಿಸದಿರುವುದು ನೌಕರರಿಗೆ ನಿರಾಸೆ ಮೂಡಿಸಿದೆ. ೭ನೇ ವೇತನ ಆಯೋಗದ ವರದಿಯನ್ನು ಸಿದ್ಧಪಡಿಸಿ ಸಲ್ಲಿಸಲಾಗಿದ್ದರು ಅನುಷ್ಠಾನ ಗೊಂಡಿಲ್ಲ. ಸರಕಾರಿ ನೌಕರರ ನ್ಯಾಯಯುತ ಬೇಡಿಕೆಯನ್ನು ಪರಿಗಣಿಸದೆ ನಿರ್ಲಕ್ಷö್ಯವಹಿಸಿರುವುದು ಖಂಡನೀಯ. ಸರಕಾರ ಬೇಡಿಕೆ ಈಡೇರಿಸದಿದ್ದಲ್ಲಿ ಎಲ್ಲಾ ಸರಕಾರಿ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದೇವೆ ಎಂದು ಎಚ್ಚರಿಸಿದರು.
ರಾಜ್ಯ ಸರಕಾರಿ ನೌಕರರು ಹಾಗೂ ಸರಕಾರದ ಅಧೀನಕ್ಕೊಳಪಡುವ ನೌಕರರಿಗೆ ೧-೦೭-೨೦೨೨ ರಿಂದ ಪರಿಷ್ಕೃತ ವೇತನ, ಭತ್ಯೆಗಳಿಗೆ ಅರ್ಹರಾಗಿದ್ದು, ೬ನೇ ವೇತನ ಆಯೋಗದ ಮಾದರಿಯಂತೆ ೭ನೇ ವೇತನ ಆಯೋಗದಿಂದ ಮಧ್ಯಂತರ ವರದಿಯನ್ನು ಪಡೆದು ಚುನಾವಣಾ ನೀತಿ ಸಂಹಿತೆ ಜಾರಿಗೂ ಮುನ್ನ ಶೇ. ೪೦ ಫಿಟ್‌ಮೆಂಟ್ ಸೌಲಭ್ಯವನ್ನು ಜಾರಿಗೆ ಬರುವಂತೆ ಆದೇಶಿಸುವಂತೆ ಒತ್ತಾಯಿಸಿದ ಅವರು, ಜಿಲ್ಲೆಯಲ್ಲಿ ಒಟ್ಟು ೧೦ ಸಾವಿರ ನೌಕರರಿದ್ದು, ಎಲ್ಲರೂ ಕರ್ತವ್ಯಕ್ಕೆ ಗೈರಾಗಲಿದ್ದೇವೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಎಂ.ಸಿ. ಅರುಣ್ ಕುಮಾರ್, ಖಜಾಂಜಿ ಪಿ.ಡಿ. ರಾಜೇಶ್, ಗೌರವಧ್ಯಕ್ಷ ಎಸ್.ಟಿ. ಶಮಿ ಹಾಜರಿದ್ದರು.