ಮಡಿಕೇರಿ, ಫೆ. ೨೩: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವು ತಾ. ೨೭ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕÀ ಕೆ.ಜಿ. ಬೋಪಯ್ಯ, ಸಂಸದ ಪ್ರತಾಪ್ ಸಿಂಹ, ಶಾಸಕ ಎಂ.ಪಿ. ಸುಜಾ ಕುಶಾಲಪ್ಪ, ಸವಿತಾ ಸಮಾಜದ ಜಿಲ್ಲಾ ಅಧ್ಯಕ್ಷ ದೊರೇಶ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.