ಮಡಿಕೇರಿ, ಫೆ. ೨೩ : ಚುನಾವಣಾ ಆಯೋಗದ ನಿರ್ದೇಶನದಂತೆ ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆಯನ್ನು ತಮ್ಮ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಲ್ಲಿ ನಡೆಸುವಂತೆ ಸೆಕ್ಟರ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೆಕ್ಟರ್ ಅಧಿಕಾರಿಗಳ ಜೊತೆ ಗುರುವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ತಮ್ಮ ಮತಗಟ್ಟೆ ವ್ಯಾಪ್ತಿಯ ಶಾಲಾ, ಕಾಲೇಜು, ಸಮುದಾಯ ಭವನಗಳಲ್ಲಿ ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಿ ವಿದ್ಯುನ್ಮಾನ ಮತಯಂತ್ರದ ಬಗ್ಗೆ ಮಾಹಿತಿ ನೀಡುವಂತಾಗಬೇಕು. ಸ್ಥಳೀಯ ಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರಿಗೆ ಅಣಕು ಮತದಾನಕ್ಕೆ ಅವಕಾಶ ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.

(ಮೊದಲ ಪುಟದಿಂದ) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಮಾತನಾಡಿ, ಚುನಾವಣಾ ಆಯೋಗದ ನಿರ್ದೇಶನದಂತೆ ತರಬೇತಿ ಮತ್ತು ಜಾಗೃತಿಗೆ ಬಳಸುವ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿಪ್ಯಾಟ್‌ನ್ನು ತೆಗೆದುಕೊಂಡು ಹೋಗುವಾಗ ಮತ್ತು ಬರುವಾಗ ಪೊಲೀಸ್ ಭದ್ರತೆ ಪಡೆಯುವಂತೆ ಸಲಹೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಚುನಾವಣಾಧಿಕಾರಿಗಳಾದ ಯತೀಶ್ ಉಲ್ಲಾಳ್, ಶಬಾನಾ ಎಂ.ಶೇಖ್, ತಹಶೀಲ್ದಾರರು, ಸೆಕ್ಟರ್ ಅಧಿಕಾರಿಗಳು ಇತರರು ಇದ್ದರು.