ನಾಪೋಕ್ಲು, ಫೆ. ೨೩: ಇತಿಹಾಸ ಪ್ರಸಿದ್ಧ ಎಮ್ಮೆಮಾಡು ಉರೂಸ್ ತಾ.೨೪ ರಿಂದ (ಇಂದಿನಿAದ) ನಡೆಯಲಿದ್ದು, ಎಮ್ಮೆಮಾಡು ಗ್ರಾಮದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ವಾಹನ ಮತ್ತು ಜನದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಗುರುವಾರ ಸಭೆ ನಡೆಯಿತು. ಎಮ್ಮೆಮಾಡು ಜಮಾಯತ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿವೈಎಸ್ಪಿ ಜಗದೀಶ್, ವೃತ್ತ ನಿರೀಕ್ಷಕ ಶೇಖರ್, ನಾಪೋಕ್ಲು ಠಾಣೆಯ ಪ್ರಭಾರ ಠಾಣಾಧಿಕಾರಿ ಗೋಪಾಲಕೃಷ್ಣ, ಎಮ್ಮೆಮಾಡು ಜಮಾಯತ್ ಅಧ್ಯಕ್ಷ ಅಬೂಬಕರ್ ಸಖಾಫಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಉರೂಸ್ ಅನ್ನು ಸುವ್ಯವಸ್ಥಿತವಾಗಿ ನಡೆಸುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನಿಸಲಾಯಿತು.