ನಾಪೋಕ್ಲು, ಫೆ. ೨೪ : ಇತಿಹಾಸ ಪ್ರಸಿದ್ಧ ಸಮೀಪದ ಎಮ್ಮೆಮಾಡು ಉರೂಸ್ ಆಚರಣೆಗೆ ಸಂಬAಧಪಟ್ಟAತೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಎಲ್ಲಾ ಧಾರ್ಮಿಕ ಮುಖಂಡರ ಮತ್ತು ಸಾರ್ವಜನಿಕರ ಸಭೆಯನ್ನು ಮಡಿಕೇರಿ ಗ್ರಾಮಾಂತರ ಠಾಣಾ ವೃತ್ತನಿರೀಕ್ಷಕ ಜಿ. ಶೇಖರ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಧಾರ್ಮಿಕ ಹಬ್ಬಗಳ ಸಂದರ್ಭದಲ್ಲಿ ಎಲ್ಲಾ ಧರ್ಮದವರು ಶಾಂತಿ, ಸುವ್ಯವಸ್ಥೆ ಕಾಪಾಡಿಕೊಳ್ಳಬೇಕು. ಅವರವರ ಧರ್ಮದ ಆಚರಣೆಗೆ ಪ್ರೋತ್ಸಾಹ ನೀಡಬೇಕು. ಈ ಸಂದರ್ಭದಲ್ಲಿ ಕಾನೂನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಎಮ್ಮೆಮಾಡು ಉರೂಸ್ಗೆ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸುತ್ತಾರೆ. ಇದರಿಂದ ನಾಪೋಕ್ಲು ಪಟ್ಟಣದಲ್ಲಿ ಜನ ಹಾಗೂ ವಾಹನ ದಟ್ಟಣೆ ಹೆಚ್ಚಾಗುತ್ತದೆ. ಆದುದರಿಂದ ಸುಗಮ ಸಂಚಾರಕ್ಕಾಗಿ ತಾ. ೨೭ರ ಸರ್ವಧರ್ಮ ಸಮ್ಮೇಳನದಂದು ಹಾಗೂ ಮಾ. ೩ರ ಉರೂಸ್ ಕೊನೆ ದಿನದಂದು ನಾಪೋಕ್ಲು ಪಟ್ಟಣದಲ್ಲಿ ಮಧ್ಯಾಹ್ನ ೧೨ ಗಂಟೆಯಿAದ ಸಂಜೆ ೭ರ ವರೆಗೆ ರಸ್ತೆಯ ಎರಡೂ ಬದಿಗಳಲ್ಲೂ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಬದಲಿ ವ್ಯವಸ್ಥೆ : ತಾ. ೨೭ ನಾಪೋಕ್ಲುವಿನಲ್ಲಿ ಸಂತೆ ದಿನವಾಗಿರುವುದರಿಂದ ವಾಹನ ನಿಲುಗಡೆಗೆ ಬದಲಿ ವ್ಯವಸ್ಥೆ ಮಾಡಲಾಗಿದ್ದು, ನೆಲಜಿ, ಕೊಳಕೇರಿ, ಕಕ್ಕಬ್ಬೆ ಭಾಗದಿಂದ ಬರುವ ಸಾರ್ವಜನಿಕರು ಹಳೇ ತಾಲೂಕು ಸರಕಾರಿ ಶಾಲಾ ಮೈದಾನದಲ್ಲಿ ಹಾಗೂ ಬೇತು ಸೇರಿದಂತೆ ಇತರ ಕಡೆಗಳಿಂದ ಬರುವ ಸಾರ್ವಜನಿಕರಿಗೆ ಬೇತು ರಸ್ತೆ, ಪೊಲೀಸ್ ಠಾಣಾ ಮೈದಾನ, ನಾಡಕಚೇರಿ ಆವರಣ, ಚೆರಿಯಪರಂಬು ರಸ್ತೆಯಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.