ಸುಂಟಿಕೊಪ್ಪ, ಫೆ. ೨೪: ನಾಕೂರು ಕಾನ್‌ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್‌ನ ವತಿಯಿಂದ ೨೩ನೇ ವರ್ಷದ ಕ್ರೀಡೋತ್ಸವ ತಾ. ೨೬ ರಂದು ಕಾನ್‌ಬೈಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದು, ನೆಲ ಮ್ಯಾಟ್ ಹಾಕಿದ ಕ್ರೀಡಾಂಗಣದಲ್ಲಿ ಕಬಡ್ಡಿ ಪಂದ್ಯಾಟ, ಮಹಿಳೆಯರಿಗೆ ಥ್ರೋಬಾಲ್ ಹಾಗೂ ಮಕ್ಕಳಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಫ್ರೆಂಡ್ಸ್ ಯೂತ್ ಕ್ಲಬ್‌ನ ಅಧ್ಯಕ್ಷ ಅಂಬೆಕಲ್ ಚಂದ್ರಶೇಖರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.

ತಾ. ೨೬ ರಂದು ಬೆಳಿಗ್ಗೆ ೧೦ ಗಂಟೆಗೆ ರಸ್ತೆ ಓಟದ ನಂತರ ಥ್ರೋಬಾಲ್ ನಡೆಯಲಿದೆ. ಕಬಡ್ಡಿ ಪಂದ್ಯಾಟದ ಉದ್ಘಾಟನೆ ಬೆಳಿಗ್ಗೆ ೧೧ ಗಂಟೆಗೆ ನಡೆಯಲಿದೆ. ಕಬಡ್ಡಿ ಫೈನಲ್ ಪಂದ್ಯಾಟವು ತಾ. ೨೭ ರಂದು ಸಂಜೆ ೫ ಗಂಟೆಗೆ ಜರುಗಲಿದೆ. ಪುರುಷರ ಹಗ್ಗಜಗ್ಗಾಟ, ಮಹಿಳೆಯರ ಹಗ್ಗಜಗ್ಗಾಟ ಕೂಡ ನಡೆಯಲಿದೆ.

ತಾ. ೨೭ ರಂದು ಸಂಜೆ ೭ ಗಂಟೆಗೆ ಡ್ಯಾನ್ಸ್ ಮೇಳ ಕಾರ್ಯಕ್ರಮ ನಡೆಯಲಿದೆ ಎಂದು ಫ್ರೆಂಡ್ಸ್ ಯೂತ್ ಕ್ಲಬ್ ಅಧ್ಯಕ್ಷ ಚಂದ್ರಶೇಖರ್ ಹಾಗೂ ಪದಾಧಿಕಾರಿಗಳಾದ ಗೌರವಧ್ಯಕ್ಷ ಕುಂಞಕೃಷ್ಣ, ಕಾರ್ಯದರ್ಶಿ ಶಂಕರ ನಾರಾಯಣ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.