ಕೂಡಿಗೆ, ಫೆ. ೨೩: ತೊರೆನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಅಳುವಾರದಲ್ಲಿರುವ ಜ್ಞಾನ ಕಾವೇರಿ ವಿಶ್ವವಿದ್ಯಾನಿಲಯಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಭೇಟಿ ನೀಡಿ ಅಭಿವೃದ್ಧಿಗೆ ಪೂರಕವಾದ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಕೇಂದ್ರದ ವಿದ್ಯಾರ್ಥಿಗಳೊಂದಿಗೆ ಮತ್ತು ಉಪನ್ಯಾಸಕರೊಂದಿಗೆ ಸಂವಾದ ನೆಡೆಸಿದರು.
ಈ ಸಂದರ್ಭ ಕುಶಾಲನಗರ ತಾಲೂಕು ತಹಶೀಲ್ದಾರ ಪ್ರಕಾಶ್, ತೊರೆನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಪ್ರಕಾಶ್, ಸದಸ್ಯರಾದ ಕೆ.ಬಿ. ದೇವರಾಜ್, ಪ್ರಬಾರ ನಿರ್ದೇಶಕ ಪ್ರೊ. ಕೆ.ಕೆ. ಧರ್ಮಪ್ಪ, ಯೋಗ ವಿಜ್ಞಾನ ವಿಭಾಗದ ಸಂಯೋಜಕ ಡಾ. ಜಿ. ಶಾಮಸುಂದರ್, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ರಾಜಕುಮಾರ ಎಸ್. ಮೇಟಿ, ಸಹಾಯಕ ಪ್ರಾಧ್ಯಾಪಕರಾದ ಡಾ. ಐ.ಕೆ. ಮಂಜಳಾ, ಡಾ. ಬಿ.ಎಸ್. ಗುಣಶ್ರೀ, ವಿವಿಧ ವಿಭಾಗಗಳ ಉಪನ್ಯಾಸಕರು, ಆಡಳಿತ ಸಿಬ್ಬಂದಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.