ವೀರಾಜಪೇಟೆ, ಫೆ. ೨೪: ವೀರಾಜಪೇಟೆ ಹೊರವಲಯದ ಬಿಟ್ಟಂಗಾಲ ಗ್ರಾಮ ಪಂಚಾಯಿತಿಗೆ ಸೇರಿದ ಪೆಗ್ಗರಿಕಾಡಿನಲ್ಲಿ ನವೋದಯ ಯುವಕ ಸಂಘದ ವತಿಯಿಂದ ಕಳೆದ ೪೯ ವರ್ಷಗಳಿಂದ ಆಚರಣೆ ಮಾಡಿಕೊಂಡು ಬರುತ್ತಿರುವ ಸರ್ವ ಧರ್ಮ ಸಮನ್ವಯ ಮಹಾ ಶಿವರಾತ್ರಿ ಪ್ರಯುಕ್ತ ಆಯೋಜಿಸಲಾಗಿದ್ದ ಸಾರ್ವಜನಿಕ ಕ್ರೀಡಾಕೂಟದ ಉದ್ಘಾಟನೆಯನ್ನು ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ನೆರವೇರಿಸಿದರು.
ನವೋದಯ ಯುವಕ ಸಂಘದ ಅಧ್ಯಕ್ಷ ಬಿ.ಎಂ. ದಿನೇಶ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸರಸು, ಸದಸ್ಯರಾದ ಚೆಂಗಟ್ಟೀರ ರಾಜ, ಶಾರದ, ಸಂಘದ ಉಪಾಧ್ಯಕ್ಷ ಸುಬ್ಬಯ್ಯ ಸೇರಿದಂತೆ ಸ್ಥಳೀಯ ಸದಸ್ಯರು ಭಾಗಿಯಾಗಿದ್ದರು.
ಈ ಸಂದರ್ಭ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.