ವೀರಾಜಪೇಟೆ, ಫೆ. ೨೪: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಹಾಗೂ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ಆಗ್ರಹಿಸಿ ಮಾರ್ಚ್ ೧ ರಿಂದ ಎಲ್ಲಾ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ವ್ಯಕ್ತ ಪಡಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಂಘದ ಅಧ್ಯಕ್ಷ ಬಿ.ಎಸ್ ಗುರುರಾಜ ಹೇಳಿದರು.
ವೀರಾಜಪೇಟೆ ಪ್ರೆಸ್‌ಕ್ಲಬ್‌ನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೨೦೨೩-೨೪ ರ ಆಯ-ವ್ಯಯದಲ್ಲಿ ಸರ್ಕಾರ ನೌಕರರ ವೇತನ ಭತ್ಯೆಗಳ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲ. ೭ನೇ ವೇತನ ಆಯೋಗದ ಸೌಲಭ್ಯಗಳನ್ನು ೦೧.೦೭.೨೦೨೨ ರಿಂದ ಜಾರಿ ಗೊಳಿಸಬೇಕು. ರಾಷ್ಟಿçÃಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಿಂದಿನ ಪಿಂಚಣಿ ಯೋಜನೆ ಯನ್ನು ಜಾರಿಗೊಳಿಸಬೇಕು. ಇವೆಲ್ಲ ಬೇಡಿಕೆಗಳನ್ನು ಮುಂದಿಟ್ಟುಕೊAಡು ಮುಷ್ಕರ ನಡೆಸಲಾಗುವುದು ಎಂದು ಹೇಳಿದರು.
ಗೋಷ್ಠಿಯಲ್ಲಿ ತಾಲೂಕು ಕಾರ್ಯದರ್ಶಿ ಬಿ.ಟಿ ದೇವರಾಜ್, ಖಜಾಂಚಿ ಎ.ಬಿ ಲಲಿತಾ, ರಾಜ್ಯ ಪರಿಷತ್ ಸದಸ್ಯ ಈ ಸುರೇಂದ್ರ ಉಪಸ್ಥಿತರಿದ್ದರು.